ಗ್ರಾಮದ ರಸ್ತೆಯ ದುರಾವಸ್ಥೆಯ ಬಗ್ಗೆ ಪ್ರಶ್ನಿಸಿದ ವ್ಯಕ್ತಿಗೆ ಕೊಲೆ ಬೆದರಿಕೆ, ಪ್ರಕರಣ ದಾಖಲು

ಗ್ರಾಮದ ರಸ್ತೆಯ ದುರಾವಸ್ಥೆಯ ಬಗ್ಗೆ ಪ್ರಶ್ನಿಸಿದ ವ್ಯಕ್ತಿಗೆ ಕೊಲೆ ಬೆದರಿಕೆ, ಪ್ರಕರಣ ದಾಖಲು

ನೇಸರ ಜು.02: ಮುಂಡಾಜೆ ಗ್ರಾಮದ ರಸ್ತೆಯ ದುರಾವಸ್ಥೆಯ ಬಗ್ಗೆ ಪ್ರಶ್ನಿಸಿದ ವ್ಯಕ್ತಿಗೆ ಗ್ರಾಮಪಂಚಾಯತು ಸದಸ್ಯ ಅವಾಚ್ಯವಾಗಿ ನಿಂದಿಸಿ ಹಲ್ಲೆಗೆ ಮುಂದಾಗಿ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದ್ದು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳೀಯ ನಿವಾಸಿ ಜಗದೀಶ್ ಪ್ರಸಾದ್ ಅವರು ತನ್ನಮೇಲೆ ಗ್ರಾ.ಪಂ ಸದಸ್ಯ ವಿಶ್ವನಾಥ ಶೆಟ್ಟಿ ಪೊಲೀಸರ ಹಾಗೂ ಸಾರ್ವಜನಿಕರ, ಹಾಗೂ ಅಧಿಕಾರಿಗಳ ಮುಂದೆಯೇ ಹಲ್ಲೆಗೆ ಮುಂದಾಗಿ ಅವಾಚ್ಯವಾಗಿ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಿದ್ದಾರೆ.

ಮುಂಡಾಜೆ ಗ್ರಾಮಪಂಚಾಯತು ವ್ಯಾಪ್ತಿಯ ಮುಂಡ್ರುಪ್ಪಾಡಿ ಶಾರದಾ ನಗರ ರಸ್ತೆಯಲ್ಲಿ ಮರಗಳನ್ನು ಕಡಿದು ಸಾಗಾಟ ಮಾಡಿ ರಸ್ತೆ ಸಂಪೂರ್ಣವಾಗಿ ಹಾಳಾಗಿತ್ತು. ಇದೇ ವಿಚಾರವಾಗಿ ಮಾತುಕತೆಗೆಂದು ಗ್ರಾ.ಫಂ ಅಧ್ಯಕ್ಷರು, ಉಪಾದ್ಯಕ್ಷರು, ಅಭಿವೃದ್ಧಿ ಅಧಿಕಾರಿ ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಾತು ಕತೆ ನಡೆಯುತ್ತಿದ್ದ ವೇಳೆ ಏಕಾಏಕಿ ವಿಶ್ವನಾಥ ಶೆಟ್ಟಿ ಅವರು ಕೊಲೆ ಬೆದರಿಕೆ ಹಾಕಿ ಹಲ್ಲೆಗೆ ಮುಂದಾಗಿದ್ದಾರೆ ಎಂದು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ. ಘಟನೆಯ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವೀಕ್ಷಿಸಿ SUBSCRIBERS ಮಾಡಿ🙏🏻

Leave a Reply

You May Have Missed

error: Content is protected !!