ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಚರಂಡಿಗೆ

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಚರಂಡಿಗೆ

ನೇಸರ ಜು.08: ಶಿರಾಡಿಯ ಗಡಿ ಭಾಗದ ದೇವಸ್ಥಾನದ ಸಮೀಪ ಬೆಂಗಳೂರಿಂದ ಮಂಗಳೂರಿಗೆ ಬರುತ್ತಿದ್ದ ಸ್ಲೀಪರ್ ಕೋಚ್ ಖಾಸಗಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ನುಗ್ಗಿದ ಘಟನೆ ಜುಲೈ 8ರ ಬೆಳಿಗ್ಗೆ ಸಂಭವಿಸಿದೆ.
ಘಟನೆಯಲ್ಲಿ ಯಾರಿಗೂ ಅಪಾಯವಾಗಿಲ್ಲ. ಪ್ರಯಾಣಿಕರೆಲ್ಲರಿಗೂ ಪರ್ಯಾಯ ಬಸ್ಸಿನ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗಿದೆ. ಈ ಭಾಗದಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆ ಅಪಾಯ ಸಂಭವಿಸಿದೆ ಎನ್ನಲಾಗಿದೆ.

ವೀಕ್ಷಿಸಿ SUBSCRIBERS ಮಾಡಿ🙏🏻

Leave a Reply

You May Have Missed

error: Content is protected !!