ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ➤ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ➤ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ನೇಸರ ಜು.09: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಶೇ. 90ಕ್ಕಿಂತ ಹೆಚ್ಚು ಅಂಕಗಳಿಸಿದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಮಾತ್ರ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ.

ವಿಶೇಷ ಸೂಚನೆ:
ವಿದ್ಯಾರ್ಥಿಯ ಹೆತ್ತವರು, ನಿಗಮ ಮಂಡಳಿ ಪ್ರಾಧಿಕಾರ ವಿಶ್ವವಿದ್ಯಾಲಯ, ಖಾಸಗಿ ಮತ್ತು ಅನುದಾನಿತ ವಿದ್ಯಾ ಸಂಸ್ಥೆಯ ನೌಕರರ ಮಕ್ಕಳಿಗೆ ಈ ಅವಕಾಶ ಇಲ್ಲ.
ಅರ್ಜಿ ಸಲ್ಲಿಸುವವರು ವಿದ್ಯಾರ್ಥಿಯ ಪಾಸುಪೋರ್ಟ್ ಅಳತೆಯ ಭಾವಚಿತ್ರ, ಅಂಕಪಟ್ಟಿ ಇಲಾಖೆಯ ಸೇವಾ ದೃಡೀಕರಣ ಪತ್ರ ಮತ್ತು ತಾಲೂಕು ಸಂಘದ ಅಧ್ಯಕ್ಷರ ದೃಢೀಕರಣ ಪತ್ರ ದಾಖಲಾತಿಯೊಂದಿಗೆ https://bitlyksgeaprathibapuraskara2022 ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನವಾಗಿದೆ. ಎಂದು ಕಡಬ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ವಿಮಲ್ ನೆಲ್ಯಾಡಿ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

ವೀಕ್ಷಿಸಿ SUBSCRIBERS ಮಾಡಿ🙏🏻

Leave a Reply

You May Have Missed

error: Content is protected !!