ಪಟ್ಲ ಪೌಂಡೇಶನ್ ಟ್ರಸ್ಟ್ ಕಲಾವಿದರಿಗೆ ದಾರಿ ದೀಪವಾಗಲಿ ➽ ಕನ್ಯಾನ ಸದಾಶಿವ ಶೆಟ್ಟಿ

ಪಟ್ಲ ಪೌಂಡೇಶನ್ ಟ್ರಸ್ಟ್ ಕಲಾವಿದರಿಗೆ ದಾರಿ ದೀಪವಾಗಲಿ ➽ ಕನ್ಯಾನ ಸದಾಶಿವ ಶೆಟ್ಟಿ

ನೇಸರ ಜು.10: ಕಂಕನಾಡಿ ಗರೋಡಿ ಬಳಿಯ ಅಟ್ಟಣೆ ಹೋಟೆಲ್ ಸಭಾಂಗಣದಲ್ಲಿ ನಡೆದ ಯಕ್ಷದ್ರುವ ಪಟ್ಲ ಪೌಂಡೇಶನ್ ನ *ಯಕ್ಷಾಶ್ರಯ ಯೋಜನೆಯಡಿಯಲ್ಲಿ ನಾಲ್ವರು ಕಲಾವಿದರಿಗೆ ಮನೆಕಟ್ಟಲು ತಲಾ ರೂ.2ಲಕ್ಷ ಸಹಾಯಧನ ನೀಡಿ ಮಾತನಾಡಿದ ಯಕ್ಷದ್ರುವ ಪಟ್ಲ ಪೌಂಡೇಶನ್ ಟ್ರಸ್ಟಿನ ಗೌರವಾಧ್ಯಕ್ಷ, ಮುಂಬಯಿ ಹೇರಂಬ ಇಂಡಸ್ಟ್ರೀಸ್ ನ ಅಧ್ಯಕ್ಷ ಸದಾಶಿವ ಶೆಟ್ಟಿ ಕನ್ಯಾನ ಪಟ್ಲ ಪೌಂಡೇಶನ್ ಸಂಸ್ಥೆಯನ್ನು ಇನ್ನಷ್ಟು ಆರ್ಥಿಕವಾಗಿ ಬಲಾಡ್ಯಗೊಳಿಸುವ ಕೆಲಸ ಆಗಬೇಕಾಗಿದೆ. ಇದಕ್ಕೆ ಎಲ್ಲರ ಸಹಕಾರದ ಅಗತ್ಯ ಇದೆ. ಅದೇ ರೀತಿ ರಾತ್ರಿ ನಿದ್ದೆಗೆಟ್ಟು ದುಡಿಯುವ ಕಲಾವಿದರ ಬಗ್ಗೆ, ಕಲಾವಿದರ ಸಂಬಳ ಮತ್ತಿತರ ಸೌಲಭ್ಯದ ಬಗ್ಗೆ ಮೇಳಗಳ ಯಜಮಾನರುಗಳು ಗಮನಹರಿಸುವಂತಾಗಲಿ. ಯಕ್ಷಗಾನ ಬಹುದೊಡ್ಡ ಕಲೆ, ಇದನ್ನು ಉಳಿಸುವ ಕೆಲಸವಾಗಲಿ. ಅಶಕ್ತರಿಗೆ ಸಹಾಯಧನ ಯೋಜನೆ ನಿತ್ಯ ನಿರಂತರ ಪಟ್ಲ ಪೌಂಡೇಶನ್ ಟ್ರಸ್ಟ್ ನಿಂದ ನಡೆಯಲಿದೆ ಎಂದು ಶುಭಹಾರೈಸಿದರು.

ಮನುಷ್ಯತ್ವ, ಪ್ರಾಮಾಣಿಕತೆಯಿಂದ ಕೆಲಸ ಮಾಡೋಣ:
ಐಕಳ ವೇದಿಕೆಯಲ್ಲಿದ್ದ ಪಟ್ಲ ಪೌಂಡೇಶನ್ ಟ್ರಸ್ಟ್ ನ ಪ್ರಧಾನ ಸಂಚಾಲಕ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮಾತನಾಡಿ ಸಮಾಜಸೇವೆ ಎಂದಾಗ ಜಾತಿಯನ್ನು ಬದಿಗಿರಿಸಿ ಮನುಷ್ಯತ್ವ, ಪ್ರಾಮಾಣಿಕತೆಯಿಂದ ಕೆಲಸ ಮಾಡೋಣ. ಸರಕಾರಕ್ಕೂ ಮಾಡಲು ಸಾಧ್ಯವಾಗದ ಕೆಲಸವನ್ನು ಕಲಾವಿದರಿಗಾಗಿ ಪಟ್ಲ ಪೌಂಡೇಶನ್ ಟ್ರಸ್ಟ್ ಮಾಡುತಿದೆ. ಪೌಂಡೇಶನ್ ನ ಗೌರವಾಧ್ಯಕ್ಷರಾಗಿ ಸದಾಶಿವ ಶೆಟ್ಟಿ ಕನ್ಯಾನ ದೇವರಂತೆ ಒದಗಿ ಬಂದಿದಾರೆ. ಇದು ಪೌಂಡೇಶನ್ ಮತ್ತು ಕಲಾವಿದರ ಪುಣ್ಯ. ಪಟ್ಲ ಪೌಂಡೇಶನ್ ಟ್ರಸ್ಟ್ ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ದ್ಯೇಯೋದ್ದೇಶ ಒಂದೇ ಆಗಿರುತ್ತದೆ. ಬಡವರ ನೆರವಿಗಾಗಿ ಬೇಡುವುದು ಮತ್ತು ಕೊಡುವುದು ಎಂದರು. ಪ್ರಸ್ತಾವಿಕವಾಗಿ ಪಟ್ಲ ಪೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಮಾತನಾಡಿ, ಪೌಂಡೇಶನ್ ಟ್ರಸ್ಟ್ ಕಳೆದ ಆರು ವರ್ಷಗಳ ಅವಧಿಯಲ್ಲಿ ಈವರೆಗೆ ವಿವಿಧ ಯೋಜನೆಗಳಡಿ ಎಂಟೂವರೆ ಕೋಟಿ ರೂಪಾಯಿಗೂ ಮಿಕ್ಕಿ ಸಹಾಯ ಧನವನ್ನು ಕಲಾವಿದರಿಗೆ ಮಾಡಿದೆ. ಸದಾಶಿವ ಶೆಟ್ಟಿ ಕನ್ಯಾನ ಮತ್ತು ಐಕಳ ಹರೀಶ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಟ್ರಸ್ಟ್ ಮುಂದಿನ ದಿನಗಳಲ್ಲಿ ಮಹತ್ತರ ಯೋಜನೆಗಳನ್ನು ರೂಪಿಸಲಿದೆ ಎಂದರು.

ವೀಕ್ಷಿಸಿ SUBSCRIBERS ಮಾಡಿ🙏🏻

ಮನೆಕಟ್ಟಲು ನೆರವು:
ಕಮಲ ಶಿಲೆ ಮೇಳದ ಲಕ್ಷ್ಮಣ ಭಂಡಾರಿ, ಮಾರಣ ಕಟ್ಟೆ ಮೇಳದ ತಿಮ್ಮಪ್ಪ ದೇವಾಡಿಗ, ಮಂದಾರ್ತಿ ಮೇಳದ ನರಸಿಂಹ ನಾಯಕ್ ಮತ್ತು ಪೊಳಲಿಯ ಚಂದ್ರಹಾಸ ಪೂಜಾರಿಯವರಿಗೆ ಮನೆ ಕಟ್ಟಲು ತಲಾ 2ಲಕ್ಷ ರೂಪಾಯಿ ಹಸ್ತಾಂತರಿಸಲಾಯಿತು. ವೇದಿಕೆ ಯಲ್ಲಿ ಟ್ರಸ್ಟ್ ನ ಕೋಶಾಧಿಕಾರಿ ಸಿ.ಎ.ಸುದೇಶ್ ಕುಮಾರ್ ರೈ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು, ಉಪಾಧ್ಯಕ್ಷ ಡಾ.ಮನು ರಾವ್ ವಂದಿಸಿದರು. ಪಟ್ಲ ಪೌಂಡೇಶನ್ ಟ್ರಸ್ಟ್ ನ ಪದಾಧಿಕಾರಿಗಳು, ಟ್ರಸ್ಟಿಗಳು, ವಲಯ ಘಟಕಗಳ ಅಧ್ಯಕ್ಷರುಗಳು ಮತ್ತಿತರರು ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!