ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

ನೇಸರ ಆ.15: ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದಲ್ಲಿ 75ನೆ ಸ್ವಾತಂತ್ರ್ಯ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಹಕಾರಿ ಸಂಘದ ಅಧ್ಯಕ್ಷೆ ಶ್ರೀಮತಿ.ಶ್ವೇತಾ.ಹೆಚ್.ಕೆ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ದಿನದ ಸಂದೇಶ ನೀಡಿದರು. ಹಿರಿಯ ನಿರ್ದೇಶಕರಾದ ಶ್ರೀಮತಿ.ಸುಂದರಿ.ಎ ಶುಭಾಶಂಸನೆ ನೀಡಿದರು. ಕಾರ್ಯದರ್ಶಿ ಶ್ರೀಮತಿ.ಸಂಧ್ಯಾ ವಂದಿಸಿದರು. ಸಂಘದ ಉಪಾಧ್ಯಕ್ಷರಾದ ಶ್ರೀಮತಿ ಹೇಮಾವತಿ, ನಿರ್ದೇಶಕರಾದ ಶ್ರೀಮತಿ ಅಕ್ಷತಾ, ಶ್ರೀಮತಿ ದಿವ್ಯಾ, ಮತ್ತು ಸಂಘದ ಸದಸ್ಯರು ಹಾಗು ಹೈನುಗಾರರು ಉಪಸ್ಥಿತರಿದ್ದರು. ಸಿಹಿ ತಿಂಡಿ ವಿತರಿಸಲಾಯಿತು.
NESARA|| WhatsApp ||GROUPS |
|---|



















Leave a Reply