ಕಡಬ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕೋಟಿ ಕಂಠ ಗಾಯನ

ಕಡಬ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕೋಟಿ ಕಂಠ ಗಾಯನ

ಕಡಬ : ಕಡಬ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಬಹಳ ವಿಜೃಂಭಣೆಯಿಂದ ನಡೆಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಜನಾರ್ದನ ಕೆ.ಎನ್.ಪ್ರಾಸ್ತಾವಿಕ ಮಾತನಾಡಿದರು ಮತ್ತು ಸಂಕಲ್ಪ ವಿಧಿ ಭೋದಿಸಿದರು. ವಿದ್ಯಾರ್ಥಿಗಳಿಂದ ನನ್ನ ನಾಡು-ನನ್ನ ಹಾಡು ಸಮೂಹ ಗೀತ ಗಾಯನ ಕಾರ್ಯಕ್ರಮ ಆಯೋಜಿಸಲಾಯಿತು.
ವಿದ್ಯಾರ್ಥಿಗಳು ಸಾಮೂಹಿಕವಾಗಿ 6 ಹಾಡುಗಳನ್ನು ಹಾಡಲಾಯಿತು. ಕಾಲೇಜಿನ ಹಿರಿಯ ಉಪನ್ಯಾಸಕರಾದ ವಾಸುದೇವ ಗೌಡ ಕೋಲ್ಪೆ ಸ್ವಾಗತಿಸಿದರು. ಜ್ಞಾನೇಶ್ವರ ಎಸ್ ವಂದನಾರ್ಪಣೆ ಮಾಡಿದರು .ಶ್ರೀಮತಿ ಲಾವಣ್ಯ ಕೆ.ಎಲ್ ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಕಾರ್ಯಕ್ರಮಾಧಿಕಾರಿ ಸಲೀನ್ ಕೆ.ಪಿ ಮತ್ತು ಎಲ್ಲಾ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Previous post

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರಂತ್ಯ ಶಿಬಿರ

Next post

ಬ್ರಹ್ಮಾವರ : ಆರೂರು ಮಹತೋಭಾರ ಶ್ರೀವಿಷ್ಣುಮೂರ್ತಿ ಅನುದಾನಿತ ಪ್ರಾಥಮಿಕ ಶಾಲೆಗೆ ಉಚಿತ ಅಪಘಾತ ಸ್ಟಾರ್ ಹೆಲ್ತ್ ವಿಮಾ ಕಾರ್ಡ್ ಮತ್ತು ಸಮವಸ್ತ್ರ ವಿತರಣೆ

Leave a Reply

You May Have Missed

error: Content is protected !!