ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಚರಣ್ ಕುಮಾರ್ ಕ್ರೀಡಾಕೂಟದಲ್ಲಿ ರಾಷ್ಟ್ರಮಟ್ಟದ ಮಟ್ಟಕ್ಕೆ ಆಯ್ಕೆ

ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಚರಣ್ ಕುಮಾರ್ ಕ್ರೀಡಾಕೂಟದಲ್ಲಿ ರಾಷ್ಟ್ರಮಟ್ಟದ ಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾಭಾರತಿ ಕರ್ನಾಟಕ ಹಾಗೂ ಬಾಲ ಭಾರತಿ ವಿದ್ಯಾಲಯ, ಬಳ್ಳಾರಿ ಇವರ ಜಂಟಿ ಆಶ್ರಯದಲ್ಲಿ ಬಾಲ ಭಾರತಿ ವಿದ್ಯಾಲಯ, ಬಳ್ಳಾರಿ ಕ್ರೀಡಾಂಗಣದಲ್ಲಿ ಕರ್ನಾಟಕ, ಆಂಧ್ರ ಪ್ರದೇಶ್, ತೆಲಂಗಾಣ ರಾಜ್ಯವನ್ನು ಒಳಗೊಂಡ ಕ್ಷೇತ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 10ನೇ ತರಗತಿ ವಿದ್ಯಾರ್ಥಿ ಚರಣ್ ಕುಮಾರ್ (ಅಳಿಕೆ ದೇವಳಗುಳಿ ಕೃಷ್ಣ ಕುಮಾರ್, ಪ್ರೇಮಾ ದಂಪತಿ ಪುತ್ರ) 3 ಕಿಲೋಮೀಟರ್ ನಡಿಗೆ -ಪ್ರಥಮ, 3000 ಮೀಟರ್ -ದ್ವಿತೀಯ ಸ್ಥಾನ ಪಡೆದುಕೊಂಡಿದ್ದು,

ನವೆಂಬರ್ 19ರಿಂದ 23ರವರೆಗೆ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾನೆ ಎಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

You May Have Missed

error: Content is protected !!