ಶ್ರೀ ಸೌತಡ್ಕ ಮಹಾಗಣಪತಿ ಸನ್ನಿಧಿಯಲ್ಲಿ ಕಾಶಿ ವಿಶ್ವನಾಥನ ಮಂದಿರ ಲೋಕಾರ್ಪಣೆಯ ನೇರ ಪ್ರಸಾರ ಕಾರ್ಯಕ್ರಮ

ಶ್ರೀ ಸೌತಡ್ಕ ಮಹಾಗಣಪತಿ ಸನ್ನಿಧಿಯಲ್ಲಿ ಕಾಶಿ ವಿಶ್ವನಾಥನ ಮಂದಿರ ಲೋಕಾರ್ಪಣೆಯ ನೇರ ಪ್ರಸಾರ ಕಾರ್ಯಕ್ರಮ

ನೇಸರ ನೇಸರ ಡಿ.13:ಶ್ರೀ ಸೌತಡ್ಕ ಮಹಾಗಣಪತಿ ಸನ್ನಿಧಿಯಲ್ಲಿ ಕಾಶಿ ವಿಶ್ವನಾಥನ ಮಂದಿರ ಲೋಕಾರ್ಪಣೆಯನ್ನು ದೇಶದ ಪ್ರಧಾನಿ ನರೇಂದ್ರ ಮೋದಿ ಜೀ ನೆರವೇರಿಸುತ್ತಿರುವುದನ್ನು ನೇರ ಪ್ರಸಾರ ಸ್ಕ್ರೀನ್ ಮೂಲಕ ವೀಕ್ಷಣೆ ಮಾಡಲಾಯಿತು. ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಳದ ಮಹಾಶಕ್ತಿ ಕೇಂದ್ರ ಧರ್ಮಸ್ಥಳ ನೇತ್ರತ್ವದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೌತಡ್ಕ ಮಹಾಗಣಪತಿ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷರಾದ ಹರೀಶ್ ರಾವ್ ಮುಂಡ್ರುಪ್ಪಾಡಿ ವಹಿಸಿದರು.

ಬೆಳ್ತಂಗಡಿ ಬಿಜಿಪಿ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ರಾವ್, ಮಂಡಲ ಉಪಾಧ್ಯಕ್ಷರಾದ ಸೀತಾರಾಮ್ ಬೆಳಾಲ್, ಕೊರಗಪ್ಪ ಗೌಡ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಪ್ರಮುಖರು ಕೃಷ್ಣ ಭಟ್ ಹಿತ್ತಿಲು, ಕೊಕ್ಕಡ ಸಿ.ಎ ಬ್ಯಾಂಕ್ ನ ಅಧ್ಯಕ್ಷ ಕುಶಲಪ್ಪ ಗೌಡ ಪೂವಜೆ, ಧರ್ಮಸ್ಥಳ ಬಿಜಿಪಿ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಯೋಗಿಶ್ ಅಲಂಬಿಲ, ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಧರ್ಮಸ್ಥಳ ಬಿಜೆಪಿ ಮಹಾಶಕ್ತಿ ಕೇಂದ್ರದ ಪ್ರಮುಖರು, ಪಂಚಾಯತ್ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು, ಬಿಜೆಪಿ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳು ಹಾಗೂ ಭಕ್ತರು ಭಾಗವಹಿಸಿದರು.

Leave a Reply

You May Have Missed

error: Content is protected !!