ಮಂಗಳೂರು: ಆಟೋ ರಿಕ್ಷಾದಲ್ಲಿ ಸ್ಪೋಟ; ಇಬ್ಬರಿಗೆ ಗಾಯ

ಮಂಗಳೂರು: ಆಟೋ ರಿಕ್ಷಾದಲ್ಲಿ ಸ್ಪೋಟ; ಇಬ್ಬರಿಗೆ ಗಾಯ

ಮಂಗಳೂರು: ನಗರದ ಕಂಕನಾಡಿ ಠಾಣಾ ವ್ಯಾಪ್ತಿಯ ನಾಗುರಿಯಲ್ಲಿ ಶನಿವಾರ ಸಂಜೆ ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಸ್ಪೋಟ ಸಂಭವಿಸಿ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಸ್ಫೊಟಕ್ಕೆ ನಿಖರ ಕಾರಣ ತತ್ ಕ್ಷಣಕ್ಕೆ ತಿಳಿದುಬಂದಿಲ್ಲ. ಪ್ರಯಾಣಿಕ ಸಾಗಿಸುತ್ತಿದ್ದ ಪರಿಕರವೊಂದು ಸ್ಪೋಟಗೊಂಡು ಘಟನೆ ನಡೆದಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಗಾಯಗೊಂಡವರು ರಿಕ್ಷಾ ಚಾಲಕ ಮತ್ತು ಪ್ರಯಾಣಿಕ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು, ವಿಧಿವಿಜ್ಞಾನ ತಂಡ ಆಗಮಿಸಿ ಪರಿಶೀಲನೆ ನಡೆಸುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ

Leave a Reply

You May Have Missed

error: Content is protected !!