ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಯುವರೆಡ್ ಕ್ರಾಸ್ ಘಟಕದ ವಾರ್ಷಿಕ ಕಾರ್ಯಕ್ರಮಗಳ ಉದ್ಘಾಟನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಯುವರೆಡ್ ಕ್ರಾಸ್ ಘಟಕದ ವಾರ್ಷಿಕ ಕಾರ್ಯಕ್ರಮಗಳ ಉದ್ಘಾಟನೆ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಮಣ್ಯೇಶ್ವರ ಮಹಾವಿದ್ಯಾಲಯದ ಯುವ ರೆಡ್ ಕ್ರಾಸ್ ಘಟಕದ 2022-2023 ನೇ ಸಾಲಿನ ವಾರ್ಷಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ನಡೆಯಿತು.
ವಾಣಿಜ್ಯ ಹಾಗೂ ಉದ್ಯಮ ಆಡಳಿತ ವಿಭಾಗದ ಮುಖ್ಯಸ್ಥೆ ಹಾಗೂ ರೆಡ್ ಕ್ರಾಸ್ ಘಟಕದ ಬೋರ್ಡ್ ಮೆಂಬರ್ ಆಗಿರುವ ಶ್ರೀಮತಿ ಲತಾ ಬಿಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ರೆಡ್ ಕ್ರಾಸ್ ಘಟಕದ ಮಹತ್ವವನ್ನು ತಿಳಿಸಿದರು. ನಿಕಟ ಪೂರ್ವ ಯುವ ರೆಡ್ ಕ್ರಾಸ್ ಅಧಿಕಾರಿ ಶ್ರೀಮತಿ ಕೃತಿಕಾ ಪಿ ಎಸ್ ಉಪಸ್ಥಿತರಿದ್ದರು. ಯುವ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಶ್ರೀಮತಿ ವನಿತಾ ಕೆ ಎನ್ ಹಾಗೂ ಸೃಜನ್ ಮುಂಡೋಡಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಯುವ ರೆಡ್ ಕ್ರಾಸ್ ಘಟಕದ ಸದಸ್ಯೆ ಕುಮಾರಿ ಭವ್ಯ ಸ್ವಾಗತಿಸಿ, ಘಟಕದ ಸದಸ್ಯೆ ಆಗಿರುವ ಕುಮಾರಿ ಯಶ್ಮಿತಾ ವಂದಿಸಿ, ಕನ್ನಿಕಾ ಕಳಿಗೆ ಯವರು ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply

You May Have Missed

error: Content is protected !!