ಕಾರ್ಕಳ: ನೆಲ್ಲಿಕಾರು ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಕಾರ್ಕಳ: ನೆಲ್ಲಿಕಾರು ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಕಾರ್ಕಳ: ನೆಲ್ಲಿಕಾರು ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು
ಕಾರ್ಕಳ: ಉಡುಪಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಜಗೋಳಿ ಸಮೀಪದ ನೆಲ್ಲಿಕಾರು ಗ್ರಾ.ಪಂ.ವ್ಯಾಪ್ತಿಯ ಮೈನೇರು ಪ್ರದೇಶದಲ್ಲಿ ಕಾರು ಹಾಗೂ ಖಾಸಗಿ ಬಸ್ ನಡುವೆ ಢಿಕ್ಕಿ ಸಂಭವಿಸಿ ಗಂಡ ಹೆಂಡತಿ ಮಗು ಸಹಿತ ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ (ಡಿ.10 ರಂದು) ಬೆಳಗ್ಗೆ ನಡೆದಿದೆ.
ಆಂಧ್ರ ಮೂಲದ ಬೆಂಗಳೂರು ನಿವಾಸಿ ನಾಗರಾಜ(40) ಅವರ ಪತ್ನಿ ಪ್ರತ್ಯುಷಾ(32) ದಂಪತಿ ತಮ್ಮ ಒಂದೂವರೆ ವರ್ಷದ ಮಗುವಿನೊಂದಿಗೆ ಬೆಳ್ತಂಗಡಿ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದಾಗ ಕಾರ್ಕಳದಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಢಿಕ್ಕಿ ಹೊಡೆದು, ಕಾರು ಬಸ್ಸಿನಡಿ ಭಾಗದಲ್ಲಿ ಸಿಕ್ಕಿ ಹಾಕಿಕೊಂಡು ಅಪ್ಪಚ್ಚಿಯಾಗಿ ಮೂವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೂವರ ಮೃತದೇಹಗಳನ್ನು ಸಾರ್ವಜನಿಕರ ಸಹಕಾರದೊಂದಿಗೆ ತೆಗೆಯಲಾಗಿದೆ. ಕಾರು ಬೆಂಗಳೂರು ಮೂಲದವರು ತಿಳಿದು ಬಂದಿದೆ.
ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ತನಿಖೆ ಆರಂಭಿಸಿದ್ದಾರೆ.

Leave a Reply

You May Have Missed

error: Content is protected !!