ಅನಿತಾ ಕೌಲ್ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಶೇಖ್ ಆದಂ ಸಾಹೇಬ್ ನೆಲ್ಯಾಡಿ ಆಯ್ಕೆ

ಅನಿತಾ ಕೌಲ್ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಶೇಖ್ ಆದಂ ಸಾಹೇಬ್ ನೆಲ್ಯಾಡಿ ಆಯ್ಕೆ

ನೆಲ್ಯಾಡಿ: ಕರ್ನಾಟಕ ರಾಜ್ಯ ಜ್ಞಾನ ವಿಜ್ಞಾನ ಸಮಿತಿಯವರು ಕೊಡ ಮಾಡುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಶೇಖ್ ಆದಂ ಸಾಹೇಬ್ ಭಾಜನರಾದರು.

ಶಿಕ್ಷಕ, ಸಂಘಟಕ, ಕ್ರಿಯಾಶೀಲ ಬೋಧಕರಾಗಿರುವ ಶೇಖ್ ಆದಂ ಸಾಹೇಬ್ ರವರು 2022ನೇ ಸಾಲಿನ ಪ್ರಶಸ್ತಿಗೆ ಭಾಜನರಾದರು. ಕಡಬ ತಾಲೂಕಿನ ನೆಲ್ಯಾಡಿಯ ಕೌಕ್ರಾಡಿ ಗ್ರಾಮದವರಾದ ಇವರು ಪ್ರಸ್ತುತ ಬಂಟ್ವಾಳ ತಾಲೂಕಿನ ಕಾವಳಪಡೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾಗಿ ಕರ್ತವ್ಯ ಸಲ್ಲಿಸುತ್ತಿದ್ದಾರೆ.
ದಿನಾಂಕ 22 ಫೆಬ್ರವರಿ 2023 ರಂದು ಬೆಂಗಳೂರಿನಲ್ಲಿ ಆಯೋಜನೆಗೊಂಡಿರುವ ಸಮಾರಂಭದಲ್ಲಿ ಇವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

Leave a Reply

You May Have Missed

error: Content is protected !!