ನೆಲ್ಯಾಡಿ:ಅನಾರೋಗ್ಯದಿಂದ ಬೇಸತ್ತು ವ್ಯಕ್ತಿ ಆತ್ಮಹತ್ಯೆ

ನೆಲ್ಯಾಡಿ:ಅನಾರೋಗ್ಯದಿಂದ ಬೇಸತ್ತು ವ್ಯಕ್ತಿ ಆತ್ಮಹತ್ಯೆ

ನೆಲ್ಯಾಡಿ: ಅನಾರೋಗ್ಯದಿಂದ ಮಾನಸಿಕವಾಗಿ ಬೇಸತ್ತು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ಫೆ.01ರ ಬೆಳಗ್ಗೆ ಸಂಭವಿಸಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಕಟ್ಟೆಮಜಲು ಕ್ರಾಸ್ ನಿವಾಸಿ ಆಂತೋನಿ ಡಿಸೋಜಾ(59ವ) ಎಂದು ಗುರುತಿಸಲಾಗಿದೆ.
ಆಂತೋನಿ ಡಿಸೋಜಾ ರಿಗೆ ಪ್ಯಾರಲೈಸಿಸ್ ಮತ್ತು ಕಣ್ಣು ಕಾಣದ ಹಾಗೂ ಕಿವಿ ಕೇಳದ ಕಾಯಿಲೆ ಇದ್ದು ಚಿಕಿತ್ಸೆ ನೀಡಲಾಗುತ್ತಿತ್ತು, ಆದರೆ ಈ ಸಮಸ್ಯೆಯಿಂದ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿರಲಿಲ್ಲ. ಇದರಿಂದ ಬೇಸತ್ತ ಅವರು ಜೀವನದದಲ್ಲಿ ಜಿಗುಪ್ಸೆಗೊಂಡು ಮನೆಯ ಕೋಣೆಯೊಳಗೆ ಗೋಡೆಗೆ ಅಳವಡಿಸಿದ್ದ ತೆಂಗಿನ ಮರದ ಅಡ್ಡಕ್ಕೆ ಹಾಗೂ ಕುತ್ತಿಗೆಗೆ ಲುಂಗಿ ಕುಣಿಕೆಯನ್ನು ಮಾಡಿಕೊಂಡು ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

You May Have Missed

error: Content is protected !!