ಕಡಬ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ಚರಿಷ್ಮ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಡಬ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ಚರಿಷ್ಮ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಡಬ: ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯ ಮಟ್ಟದ ಕ್ರೀಡಾಕೂಟ ದಿನಾಂಕ ಫೆ.19 ರಿಂದ ಫೆ.22 ರ ವರೆಗೆ ಮೈಸೂರಿನ ವಿಹಾರ ಸ್ಟೇಡಿಯಂ ನಲ್ಲಿ ನಡೆಯಿತು.

17 ರ ವಯೋಮಾನದ ಬಾಲಕಿಯರ ವಿಭಾಗದ 1500 ಮೀಟರ್ ಓಟದ ಸ್ಪರ್ಧೆಯಲ್ಲಿ ಕಡಬ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ಚರಿಷ್ಮ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಇವಳಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಲೋಕೇಶ್ ತರಬೇತಿ ನೀಡಿರುತ್ತಾರೆ.

Leave a Reply

You May Have Missed

error: Content is protected !!