ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ : ಸಚಿವ ಸುಧಾಕರ್ ಘೋಷಣೆ

ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ : ಸಚಿವ ಸುಧಾಕರ್ ಘೋಷಣೆ

ನೇಸರ ಡಿ.26: ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡಿ ಭಾನುವಾರ ಸರಕಾರ ಆದೇಶ ಹೊರಡಿಸಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ಸಚಿವ ಡಾ. ಸುಧಾಕರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಡಿ.28 ರಿಂದ ರಾತ್ರಿ 10 ರಿಂದ ಬೆಳಗ್ಗೆ 5 ರ ವರೆಗೆ 10 ದಿನ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕವಾಗಿ ಹೊಸ ವರ್ಷ ಆಚರಣೆಗೆ ಬ್ರೇಕ್ ಹಾಕಲಾಗಿದೆ.ಸಭೆ ಸಮಾರಂಭಗಳಲ್ಲಿ ಶೇ. 50 ರಷ್ಟು ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಹೊಸ ವರ್ಷಾಚರಣೆ ವೇಳೆ ಕೋವಿಡ್ ಮತ್ತು ಒಮಿ ಕ್ರಾನ್ ಆತಂಕದ ಹಿನ್ನಲೆ ಯಲ್ಲಿ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

You May Have Missed

error: Content is protected !!