ರೆಫ್ರಿಜರೇಶನ್ ರಿಪೇರಿ ಅಂಗಡಿಯಲ್ಲಿ ಅಗ್ನಿ ಅನಾಹುತ, ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

ರೆಫ್ರಿಜರೇಶನ್ ರಿಪೇರಿ ಅಂಗಡಿಯಲ್ಲಿ ಅಗ್ನಿ ಅನಾಹುತ, ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

ಪಾಣೆಮಂಗಳೂರು ಮೆಲ್ಕಾರ್ ಸಮೀಪದ ಗುಡ್ಡೆ ಅಂಗಡಿಯಲ್ಲಿ ಭಾನುವಾರ ಸಂಜೆ ಆಕಸ್ಮಿಕವಾಗಿ ರೆಫ್ರಿಜರೇಟರ್ ರಿಪೇರಿ ಅಂಗಡಿಯಲ್ಲಿ ಅಗ್ನಿ ಅವಘಡ ಉಂಟಾಗಿ ಅಪಾರ ನಷ್ಟ ಸಂಭವಿಸಿದೆ.

ಬಿ ಸಿ ರೋಡು ಸಮೀಪದ ಪರ್ಲಯಾ ನಿವಾಸಿ ಫರೂಕ್ ಎಂಬುವರಿಗೆ ಸೇರಿದ ಈ ಅಂಗಡಿಯಲ್ಲಿ ಅವಘಡ ಸಂಭವಿಸಿದ್ದು. ವಿಷಯ ತಿಳಿದ ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ.

ಸ್ಥಳಕ್ಕಾಗಮಿಸಿದ ಬಂಟ್ವಾಳ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.

Leave a Reply

You May Have Missed

error: Content is protected !!