ನದಿಯಲ್ಲಿ ಮುಳುಗಿ 10ನೇ ತರಗತಿ ವಿದ್ಯಾರ್ಥಿ ಮೃತ್ಯು

ನದಿಯಲ್ಲಿ ಮುಳುಗಿ 10ನೇ ತರಗತಿ ವಿದ್ಯಾರ್ಥಿ ಮೃತ್ಯು

ಉಪ್ಪಿನಂಗಡಿ: ಸಮೀಪದ ನೇತ್ರಾವತಿ ನದಿಯಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಬಿಳಿಯೂರು ಗ್ರಾಮದಲ್ಲಿ ರವಿವಾರ ಸಂಜೆ ನಡೆದಿದೆ.

ಮಾಣಿ ನಿವಾಸಿ ತ್ವಾಹಿರ್ ಎಂಬವರ ಪುತ್ರ ಮುಹಮ್ಮದ್ ಸಲ್ಮಾನ್ (16) ಮೃತ ಬಾಲಕ ಎಂದು ಗುರುತಿಸಲಾಗಿದೆ.
ಈತ ಪೆರ್ನೆಯಲ್ಲಿರುವ ತನ್ನ ಚಿಕ್ಕಮ್ಮನ ಮನೆಗೆ ಹೋಗಿದ್ದು, ಚಿಕ್ಕಮ್ಮನ ಮಗನೊಂದಿಗೆ ಬಿಳಿಯೂರಿನಲ್ಲಿ ನೇತ್ರಾವತಿ ನದಿಗೆ ನೂತನವಾಗಿ ನಿರ್ಮಾಣವಾಗುತ್ತಿರುವ ಅಣೆಕಟ್ಟು ಬಳಿ ಹೋಗಿದ್ದು, ಈ ಸಂದರ್ಭ ನದಿಯ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಈತ ಮಾಣಿ ಬಾಲವಿಕಾಸ ಶಾಲೆಯ ವಿದ್ಯಾರ್ಥಿ
ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

You May Have Missed

error: Content is protected !!