ಗಾಂಜಾ ಮಾರಾಟ ಪ್ರಕರಣ; ಆರೋಪಿ ಬಂಧನ

ಗಾಂಜಾ ಮಾರಾಟ ಪ್ರಕರಣ; ಆರೋಪಿ ಬಂಧನ

ಪುತ್ತೂರು: ಗಾಂಜಾ ಮಾರಾಟ ಪ್ರಕರಣವೊಂದನ್ನು ಪತ್ತೆ ಹಚ್ಚಿದ ಪುತ್ತೂರು ನಗರ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನಿಂದ 40ಸಾವಿರ ರೂ. ಮೌಲ್ಯದ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ಎಂಬಲ್ಲಿನ ಬಸ್ಸು ತಂಗುದಾಣದಲ್ಲಿ ಆರೋಪಿಯನ್ನು ಸೊತ್ತು ಸಮೇತ ವಶಕ್ಕೆ ಪಡೆದುಕೊಂಡಿದ್ದಾರೆ. ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಬುಳ್ಳೇರಿಕಟ್ಟೆ ನಿವಾಸಿ ಇಕ್ಬಾಲ್ (35) ಬಂಧಿತ ಆರೋಪಿ. ಈತನಿಂದ 1.020 ಕೆ.ಜಿ ತೂಕದ ಗಾಂಜಾವನ್ನು ವಶಕ್ಕೆ ಪಡೆದು ಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

You May Have Missed

error: Content is protected !!