ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಮತದಾನ ಜಾಗೃತಿ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಮತದಾನ ಜಾಗೃತಿ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ದಿನಾಂಕ 8.4.2023 ರಂದು ಆಂತರಿಕ ಗುಣಮಟ್ಟ ಕೋಶ, ರಾಷ್ಟ್ರೀಯ ಸೇವಾ ಯೋಜನೆ, ರಾಜ್ಯಶಾಸ್ತ್ರ ವಿಭಾಗ ಹಾಗೂ Electoral Literacy club ವತಿಯಿಂದ ವಿದ್ಯಾರ್ಥಿಗಳಿಗೆ ಮತದಾನದ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಕಾಶ್ ಕೆ ಇವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವವನ್ನು ತಿಳಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಶ್ರೀಮತಿ ಆರತಿ ಕೆ ಸ್ವಾಗತಿಸಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ರೀಮತಿ ಸ್ವಾತಿ ವಂದಿಸಿದರು. ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರು ಹಾಗೂ ರಾಷ್ಟ್ರೀಯ ಸೇವಾ ಸಹ ಯೋಜನಾಧಿಕಾರಿಗಳಾದ ಶ್ರೀಕುಮಾರ್ ಶೇಣಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಅನ್ವಿತಾ ಪ್ರಾರ್ಥಿಸಿದರು.

Leave a Reply

You May Have Missed

error: Content is protected !!