ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌ರವರು ಎ.22ರಂದು ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಮಾಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಡಿಕೆಶಿ ಅವರನ್ನು ಡಿ.ಸುರೇಂದ್ರ ಕುಮಾರ್ ಸ್ವಾಗತಿಸಿದರು.
ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಈ ಸಂದರ್ಭ ಕೆ.ಪಿ.ಸಿ.ಸಿ ಮಾಧ್ಯಮ ವಕ್ತಾರರು, ಕೊಪ್ಪ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ನ್ಯಾಯವಾದಿ ಸುಧೀರ್ ಕುಮಾರ್ ಮರೊಳ್ಳಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ, ಎ.ಐ.ಸಿ.ಸಿ ವೀಕ್ಷಕರಾದ ಶಾಸಕ ಸಂಜೀವ್ ಜೋಸೆಫ್, ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರು, ವಿಧಾನ ಪರಿಷತ್ ಶಾಸಕರಾದ ಕೆ.ಹರೀಶ್ ಕುಮಾರ್, ಮಾಜಿ ಶಾಸಕರಾದ ಕೆ. ವಸಂತ ಬಂಗೇರ, ಕೆ.ಪಿ.ಸಿ.ಸಿ ಸಂಯೋಜಕರಾದ ಶಾಹಿದ್ ತೆಕ್ಕಿಲ್, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜನ್ ಜಿ. ಗೌಡ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಪಕ್ಷದ ನಾಯಕರುಗಳು ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!