ಬಸ್‌-ಕಾರು ಢಿಕ್ಕಿ: ಇಬ್ಬರಿಗೆ ಗಾಯ

ಬಸ್‌-ಕಾರು ಢಿಕ್ಕಿ: ಇಬ್ಬರಿಗೆ ಗಾಯ

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ -ಮರ್ದಾಳ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ಪೇರಡ್ಕ ಸಮೀಪ ಬಸ್‌ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮಂಗಳವಾರ ಸಂಭವಿಸಿದೆ.

ಧರ್ಮಸ್ಥಳ ಕಡೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಸುಬ್ರಹ್ಮಣ್ಯ ಕಡೆ ತೆರಳುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಕಾರಿನ ಹಿಂಬದಿ ಸೀಟಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದು ಅವರನ್ನು ಕಡಬ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಳೆ ಬರುತ್ತಿದ್ದುದರಿಂದ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

Leave a Reply

You May Have Missed

error: Content is protected !!