ಗೃಹಪ್ರವೇಶದ ಆಮಂತ್ರಣ ಪತ್ರಿಕೆ ನೀಡಲು ಹೋದ ವ್ಯಕ್ತಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆ

ಗೃಹಪ್ರವೇಶದ ಆಮಂತ್ರಣ ಪತ್ರಿಕೆ ನೀಡಲು ಹೋದ ವ್ಯಕ್ತಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆ

ಕೊಟ್ಟಿಗೆಹಾರ: ಸಂಬಂಧಿಕರಿಗೆ ಗೃಹಪ್ರವೇಶದ ಆಮಂತ್ರಣ ಪತ್ರಿಕೆ ನೀಡಲು ಚಿಕ್ಕಮಗಳೂರಿಗೆ ಹೋಗಿ ಹಿಂದಿರುಗುವ ವೇಳೆ ಮಳೆ ಬಂದ ಹಿನ್ನೆಲೆಯಲ್ಲಿ ಪತ್ನಿಯನ್ನು ಬಸ್ ಹತ್ತಿಸಿ, ದ್ವಿಚಕ್ರ ವಾಹನದಲ್ಲಿ ಬರುತ್ತೇನೆಂದು ಹೇಳಿದ ಪತಿಯ ಶವ ಕೊಟ್ಟಿಗೆಹಾರದ ಹೆಬ್ಬರಿಗೆ ಸಮೀಪ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಘಟನೆ ಏ.26 ರಂದು ನಡೆದಿದೆ.

ಚಿಕ್ಕಮಗಳೂರು ತಾಲ್ಲೂಕಿನ ತೇಗೂರಿನ ದಿಲೀಪ್ (40) ಮೃತ ಪಟ್ಟ ವ್ಯಕ್ತಿಯಾಗಿದ್ದಾರೆ. ಮುಡಿ ತೆಗೆಯುವ ಕಾರ್ಯ ವಹಿಸುತ್ತಿದ್ದ ದಿಲೀಪ್ ಉಜಿರೆಯಲ್ಲಿ ವಾಸ್ತವ್ಯವಿದ್ದರು.

ಧರ್ಮಸ್ಥಳ ಗ್ರಾಮದ ಕೂಟದಕಲ್ಲು ಎಂಬಲ್ಲಿ ನೂತನ ಮನೆ ನಿರ್ಮಾಣ ಮಾಡಿದ್ದರು. ಇದರ ಆಮಂತ್ರಣ ಪತ್ರಿಕೆಯನ್ನು ತಮ್ಮ ಸಂಬಂಧಿಕರಿಗೆ ನೀಡಲು ಪತ್ನಿಯೊಂದಿಗೆ ತೇಗೂರಿಗೆ ಬಂದಿದ್ದ ದಿಲೀಪ್ ಬುಧವಾರ ದ್ವಿಚಕ್ರದ ವಾಹನದಲ್ಲಿ ಉಜಿರೆಗೆ ಹೊರಟ್ಟಿದ್ದರು. ಕೊಟ್ಟಿಗೆಹಾರ ಸಮೀಪ ಬರುತ್ತಿದ್ದಂತೆ ಮಳೆ ಪ್ರಾರಂಭವಾಗಿದ್ದರಿಂದ ಪತ್ನಿಯನ್ನು ಬಸ್ಸಿಗೆ ಹತ್ತಿಸಿ ಉಜಿರೆಗೆ ಹೋಗಲು ಹೇಳಿ ತಾನು ಮಳೆ ನಿಂತ ಮೇಲೆ
ಬರುವುದಾಗಿ ತಿಳಿಸಿದ್ದಾರೆ.

ಬುಧವಾರ ಸಂಜೆ ಹೆಬ್ಬರಿಗೆ ಸಮೀಪ ರಸ್ತೆ ಬದಿಯಲ್ಲಿ ದಿಲೀಪ್ ಅವರ ಮೃತದೇಹ ಪತ್ತೆಯಾಗಿದೆ. ಮೃತದೇಹದ ಜತೆಗಿದ್ದ ಮೊಬೈಲ್‌ ನಿಂದಾಗಿ ಮೃತದೇಹದ ಗುರುತು ಪತ್ತೆಯಾಗಿದೆ.
ಈ ಬಗ್ಗೆ ಸ್ಥಳಕ್ಕೆ ಬಣಕಲ್ ಪೊಲೀಸ್ ಇಲಾಖೆ ಮಾಹಿತಿ ಬಂದು ಅವರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ. ಅಣ್ಣಪ್ಪಸ್ವಾಮಿ ದೇವಸ್ಥಾನದ ಸಮೀಪ ದ್ವಿಚಕ್ರ ವಾಹನ ಪತ್ತೆ.
ದಿಲೀಪ್ ಅವರ ದ್ವಿಚಕ್ರ ವಾಹನ ಚಾರ್ಮಾಡಿ ಘಾಟಿಯ ಅಣ್ಣಪ್ಪಸ್ವಾಮಿ ದೇವಸ್ಥಾನದ ಸಮೀಪ ಅಪಘಾತವಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಿದ್ದ ಮನೆಯ ಗೃಹಪ್ರವೇಶ ಮೇ 5 ರಂದು ಹಮ್ಮಿಕೊಂಡಿದ್ದು ಗೃಹಪ್ರವೇಶಕ್ಕೆ ಆಹ್ವಾನಿಸಲೆಂದು ಚಿಕ್ಕಮಗಳೂರಿಗೆ ಬಂದಿದ್ದವರು ಹಿಂದಿರುಗುವ ವೇಳೆ ಈ ಘಟನೆ ನಡೆದಿದ್ದು, ಅಪಘಾತ ನಡೆದ ಜಾಗದಿಂದ ಸ್ವಲ್ಪ ದೂರದಲ್ಲಿ ಶವ ಪತ್ತೆಯಾಗಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ.

Leave a Reply

You May Have Missed

error: Content is protected !!