5ನೇ ಗ್ಯಾರಂಟಿ ಘೋಷಣೆ ಮಾಡಿದ ರಾಹುಲ್ ಗಾಂಧಿ

5ನೇ ಗ್ಯಾರಂಟಿ ಘೋಷಣೆ ಮಾಡಿದ ರಾಹುಲ್ ಗಾಂಧಿ

ಮಂಗಳೂರು : ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ‌ ಅವರು ಕಾಂಗ್ರೆಸ್ ನ ಐದನೇ ಗ್ಯಾರಂಟಿಯನ್ನು ಗುರುವಾರ ಘೋಷಣೆ ಮಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಮೊದಲ ದಿನದಿಂದಲೇ ಮಹಿಳೆಯರಿಗೆ ಸರಕಾರಿ ಬಸ್ಸಲ್ಲಿ ಉಚಿತ ಪ್ರಯಾಣ ಗ್ಯಾರಂಟಿ ಘೋಷಣೆ ಮಾಡಿದ್ದಾರೆ.

ಮಂಗಳೂರು ನಗರದ ಹೊರವಲಯದ ಅಡ್ಯಾರ್ ನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಚುನಾವಣ‌ ಪ್ರಚಾರದ ಬಹಿರಂಗ ಸಭೆಯಲ್ಲಿ ಈ ಘೋಷಣೆ ಮಾಡಿದ್ದಾರೆ.

ಸಮಾವೇಶಕ್ಕೆ ರಾಹುಲ್ ಗಾಂಧಿ ಹೆಲಿಕಾಪ್ಟರ್ ಆಗಮಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಪುಳಕ. ವೇದಿಕೆಯತ್ತ ಆಗಮಿಸಿದ ಅವರನ್ನು ನೋಡಲು ನೂಕು ನುಗ್ಗಲು‌ ಉಂಟಾಯಿತು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಮೊದಲಾದವರು ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಿದರು.

Leave a Reply

You May Have Missed

error: Content is protected !!