ಪುಂಜಾಲಕಟ್ಟೆ: ಕಾರು- ದ್ವಿಚಕ್ರ ವಾಹನ ಢಿಕ್ಕಿ, ಓರ್ವ ಮೃತ್ಯು

ಪುಂಜಾಲಕಟ್ಟೆ: ಕಾರು- ದ್ವಿಚಕ್ರ ವಾಹನ ಢಿಕ್ಕಿ, ಓರ್ವ ಮೃತ್ಯು

ಪುಂಜಾಲಕಟ್ಟೆ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ಹೊಡೆದು ಸವಾರನೋರ್ವ ಮೃತಪಟ್ಟು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ಎ.28 ರಂದು ಬೆಳಗ್ಗೆ ಸಂಭವಿಸಿದೆ.

ಸ್ಕೂಟಿ ಸವಾರ, ಅಮ್ಟಾಡಿ ನಿವಾಸಿ ಸಂದೀಪ್ ಲೋಬೊ(35) ಮೃತಪಟ್ಟವರಾಗಿದ್ದು, ಅವರ ನೆರೆಮನೆಯ ಆಕಾಶ್ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅವರಿಬ್ಬರು ವೆಲ್ಡಿಂಗ್ ಕೆಲಸ ಮಾಡುವ ಕಾರ್ಮಿಕರಾಗಿದ್ದು, ಬಿ.ಸಿ.ರೋಡಿನಿಂದ ಪುಂಜಾಲಕಟ್ಟೆ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಅತೀವೇಗದಲ್ಲಿ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದ ರಿಟ್ಜ್ ಕಾರು ಢಿಕ್ಕಿ ಹೊಡೆದಿದೆ.
ಅಪಘಾತದಿಂದ ಗಾಯಗೊಂಡಿದ್ದ ಸಂದೀಪ್ ಲೋಬೋ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಅಸುನೀಗಿದ್ದು, ಆಕಾಶ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪುಂಜಾಲಕಟ್ಟೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

You May Have Missed

error: Content is protected !!