ನಾಳೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮಂಗಳೂರಿಗೆ

ನಾಳೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮಂಗಳೂರಿಗೆ

ಮಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮೇ 1ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿ‌ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರುಕ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಧ್ಯಾಹ್ನ ಕೃಷ್ಣಾಪುರದ ಫಿಝ ಗಾರ್ಡನ್ ಹೆಲಿಪಾಡ್‌ ಗೆ ಅಗಮಿಸಲಿದ್ದು, ಸುರತ್ಕಲ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

ಬಳಿಕ ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಬಲವಂಡಿ ದೈವಸ್ಥಾನ, ಗುರುಪುರ ಕಂಬಳ ದರ್ಗಾ ಭೇಟಿ‌ ನೀಡಲಿದ್ದಾರೆ. ಸಂಜೆ 5 ಗಂಟೆಗೆ ಗುರುಪುರ ಕೈಕಂಬದ ವಸ್ತು ಪ್ರದರ್ಶನ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮೇ 1 ಕಾರ್ಮಿಕ ದಿನದ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಸಮ್ಮಾನ ನಡೆಯಲಿದೆ ಎಂದು ಹೇಳಿದರು.

ಮೇ.5ಕ್ಕೆ ಎಚ್.ಡಿ.ಕೆ. ಕೃಷ್ಣಾಪುರಕ್ಕೆ ಮಾಜಿ ಸಿಎಂ ಎಚ್.ಡಿ.‌ಕುಮಾರಸ್ವಾಮಿ ಅವರು ಮೇ 5ರಂದು ಕೃಷ್ಣಾಪುರದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಫಾರೂಕ್ ಅವರು ತಿಳಿಸಿದರು.

Previous post

ಬೆಳ್ತಂಗಡಿ : ಬೈಕ್ ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಪತ್ತೆ; ರೌಡಿಶೀಟರ್ ನನ್ನು ಹೆಡೆಮುರಿ ಕಟ್ಟಿದ ಪೊಲೀಸರು

Next post

ನೇತ್ರಾವತಿ ನದಿಯಲ್ಲಿ ಮುಳುಗಿ ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಮೃತ್ಯು

Leave a Reply

You May Have Missed

error: Content is protected !!