ಉಪ್ಪಿನಂಗಡಿಯಲ್ಲಿ 7 ಅಂಗಡಿಗಳಿಗೆ ನುಗ್ಗಿದ ಕಳ್ಳರು

ಉಪ್ಪಿನಂಗಡಿಯಲ್ಲಿ 7 ಅಂಗಡಿಗಳಿಗೆ ನುಗ್ಗಿದ ಕಳ್ಳರು

ಉಪ್ಪಿನಂಗಡಿ: ಇಲ್ಲಿನ ಬ್ಯಾಂಕ್ ರಸ್ತೆಯಲ್ಲಿನ 7 ಅಂಗಡಿಗಳಿಗೆ ಶನಿವಾರ ರಾತ್ರಿ ಕಳ್ಳತನ ನಡೆಸಿದ ಘಟನೆ ನಡೆದಿದೆ.

ಉಪ್ಪಿನಂಗಡಿ ಹಳೇ ಬಸ್ ನಿಲ್ದಾಣದ ಬಳಿಯ ಚಿನ್ನ,ಬೆಳ್ಳಿ ಆಭರಣದ ಅಂಗಡಿಗೆ ಮಾಡಿನ ಹಂಚು ತೆಗೆದು ಒಳ ನುಗ್ಗಿದ ಕಳ್ಳ ಚಿನ್ನಾಭರಣದ ತಿಜೋರಿಯ ಬಾಗಿಲು ತೆರೆಯಲು ವಿಫಲನಾಗಿ, ಚಿಲ್ಲರೆ ಮೊತ್ತವನ್ನು ಎಗರಿಸಿದ್ದಾರೆ. ಸನಿಹದ ಮೆಡಿಕಲ್ ಶಾಪ್ ಗೂ ಹಂಚು ತೆಗೆದು ಒಳ ನುಗ್ಗಿ ಅಂಗಡಿಯೊಳಗಿದ್ದ ಮೊಬೈಲ್ ವೊಂದನ್ನು ಕದ್ದೊಯ್ದಿದ್ದು, ಹಣಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಅದೇ ಕಟ್ಟಡದ ಅಂಗಡಿಗೂ ಮಾಡಿನ ಹಂಚು ತೆಗೆದು ಒಳ ನುಗ್ಗಿ 2 ಸ್ನಾನಕ್ಕೆ ಬಳಸುವ ಟೆವೆಲ್ ಕದ್ದೊಯ್ದಿದ್ದಾರೆ.
ಇದೇ ರಸ್ತೆಯ ಕೆನರಾ ಬ್ಯಾಂಕ್ ಸನಿಹದ ಹೋಟೇಲ್, ಫರ್ನೀಚರ್ ಅಂಗಡಿ, ಜನರಲ್ ಸ್ಟೋರ್, ದಿನಸಿ ಅಂಗಡಿ ಕಟ್ಟಡಕ್ಕೂ ಒಳ ನುಗ್ಗಿದ ಕಳ್ಳರು ಅಲ್ಲಿಂದಲೂ ಕೈಗೆ ದೊರೆತ ವಸ್ತುಗಳನ್ನೆಲ್ಲಾ ಎಗರಿಸಿದ್ದಾರೆ. ಫನಿರ್ಚರ್ ಅಂಗಡಿಯೊಳಗಿದ್ದ ಬೆಲೆ ಬಾಳುವ ವಾಚೊಂದನ್ನು ಕದ್ದೊಯ್ದಿದ್ದು, ಎಲ್ಲೆಡೆ ಅಂಗಡಿಯ ಮಹಡಿನಿಂದಲೇ ಪ್ರವೇಶಿಸಿದ್ದಾರೆ.
ಸಿಸಿ ಟಿವಿ ಕ್ಯಾಮರಾದಲ್ಲಿ ಕಳ್ಳನ ಭಾವಚಿತ್ರ ಸ್ಪಷ್ಟವಾಗಿ ಸೆರೆಯಾಗಿದ್ದು, ಕಳ್ಳ ಪ್ರತಿಯೊಂದು ಅಂಗಡಿಯೊಳಕ್ಕೆ ನುಗ್ಗಿದಾಕ್ಷಣ ಸಿಸಿ ಟಿವಿ ಕ್ಯಾಮರಾದ ದಿಕ್ಕು ಬದಲಾಯಿಸುವ ಪ್ರಯತ್ನಿಸಿದ್ದಾರೆ. ಆ ವೇಳೆ ಆತನ ಮುಖ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

You May Have Missed

error: Content is protected !!