ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ದೇವಚಳ್ಳ ಭಾಗಗಳಲ್ಲಿ ಚುನಾವಣಾ ಪ್ರಚಾರ

ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ದೇವಚಳ್ಳ ಭಾಗಗಳಲ್ಲಿ ಚುನಾವಣಾ ಪ್ರಚಾರ

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ದೇವಚಳ್ಳ ಗ್ರಾಮದ ವಿವಿಧ ಭಾಗಗಳಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಾಯಿತು.

ಗೌರಿಗುಂಡಿ, ವಾಲ್ತಾಜೆ, ಕನ್ನಡಕಜೆ ಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಹಾಗೂ ರಾಜ್ಯ ಮಹಿಳಾ ಮೊರ್ಚಾದ ಅಧ್ಯಕ್ಷೆ ಗೀತಾ ವಿವೇಕಾನಂದ, ರಾಷ್ಟ್ರೀಯ ಮಹಿಳಾ ಮೊರ್ಚಾದ ಕಾರ್ಯಕಾರಣಿ ಸದಸ್ಯೆ ಆಶ್ವಿನಿ ಮಂಜೇಶ್ವರ, ಜಿಲ್ಲಾ ಅಧ್ಯಕ್ಷೆ ಧನಲಕ್ಷ್ಮಿ ಗಟ್ಟಿ, ಜಿಲ್ಲಾ ಮಹಿಳಾ ಮೊರ್ಚಾ ಕಾರ್ಯದರ್ಶಿ ಸೇವಂತಿ ಮನೆ ಮನೆ ಭೇಟಿ ಮಾಡಿ ಚುನಾವಣಾ ಪ್ರಚಾರ ಕೈಗೊಂಡರು.

ವಿವಿಧ ಕಡೆಗಳಲ್ಲಿ ಸಭೆ ನಡೆಯಿತು, ಈ ಸಂದರ್ಭದಲ್ಲಿ ಮಂಡಲ ಪ್ರಮುಖರಾದ ಎಸ್.ಎನ್ ಮನ್ಮಥ, ವೆಂಕಟ್ ದಂಬೆಕೋಡಿ, ಮುಳಿಯ ಕೇಶವ ಭಟ್, ವಿನಯ್ ಕುಮಾರ್ ಮುಳುಗಾಡು, ಸಾಮಾಜಿಕ ಜಾಲಾತಾಣ ಸಹಸಂಚಾಲಕ ಪ್ರಸಾದ್ ಕಾಟೂರು, ಸ್ಥಳಿಯ ಶಕ್ತಿ ಕೇಂದ್ರ, ಬೂತ್ ನ‌ ಅಧ್ಯಕ್ಷರು, ಕಾರ್ಯಕರ್ತರು, ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!