ಮತಗಟ್ಟೆಯೊಳಗೆ ಮೊಬೈಲ್ ಕೊಂಡೊಯ್ಯುವಂತಿಲ್ಲ-ಡಿಸಿ

ಮತಗಟ್ಟೆಯೊಳಗೆ ಮೊಬೈಲ್ ಕೊಂಡೊಯ್ಯುವಂತಿಲ್ಲ-ಡಿಸಿ

ಮಂಗಳೂರು: ವಿಧಾನಸಭಾ ಚುನಾವಣೆಗೆ ಮತದಾನ ಕೇಂದ್ರದೊಳಗೆ ಮೊಬೈಲ್ ಕೊಂಡೊಯ್ಯುವಂತಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಡಾ.ರವಿಕುಮಾರ್ ಅವರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತಗಟ್ಟೆಯೊಳಗೆ ಓರ್ವ ಅಧಿಕಾರಿಗೆ ಮಾತ್ರ ಮೊಬೈಲ್ ಕೊಂಡೊಯ್ಯಲು ಅವಕಾಶವಿದೆ. ಉಳಿದಂತೆ ಯಾವುದೇ ಅಧಿಕಾರಿಗೆ ಮೊಬೈಲ್ ಕೊಂಡೊಯ್ಯಲು ಅವಕಾಶವಿಲ್ಲ ಎಂದಿದ್ದಾರೆ.

ಮತದಾರರೂ ಕೂಡ ಕೇಂದ್ರದೊಳಗೆ ಮೊಬೈಲ್, ಟ್ಯಾಬ್, ಲ್ಯಾಪ್ ಟಾಪ್ ಸೇರಿದಂತೆ ಯಾವುದೇ ವಸ್ತುಗಳನ್ನು ಒಳಗೆಡೆ ಕೊಂಡೊಯ್ಯಲು ಅನುಮತಿ ಇಲ್ಲ ಎಂದ ಅವರು, ಈ ಬಗ್ಗೆ ನಾವು ಯಾವುದೇ ಜವಾಬ್ದಾರಿಯನ್ನು ಹೊತ್ತುಕೊಳ್ಳುವುದಿಲ್ಲ ಎಂಡು ದ.ಕ. ಜಿಲ್ಲಾಧಿಕಾರಿ ಡಾ. ರವಿಕುಮಾರ್ ಮಾಹಿತಿ ನೀಡಿದ್ದಾರೆ.

Leave a Reply

You May Have Missed

error: Content is protected !!