ಪ್ರಮಾಣ ವಚನ ಸಮಾರಂಭ – ರಾಹುಲ್ ಗಾಂಧಿ, ಪ್ರಿಯಾಂಕ ಸೇರಿ ಗಣ್ಯರ ಆಗಮನ

ಪ್ರಮಾಣ ವಚನ ಸಮಾರಂಭ – ರಾಹುಲ್ ಗಾಂಧಿ, ಪ್ರಿಯಾಂಕ ಸೇರಿ ಗಣ್ಯರ ಆಗಮನ

ಬೆಂಗಳೂರು: ಇಂದು ಮಧ್ಯಾಹ್ನ ಸರಿಯಾಗಿ 12:30ಕ್ಕೆ ಸಿದ್ದರಾಮಯ್ಯನವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.


ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಅಗಮಿಸಿದ್ದು ಇವರೆಲ್ಲಾ ಹೊಟೇಲ್ ಶಂಗ್ರಿಲಾದಲ್ಲಿ ವಿಶ್ರಾಂತಿ ಪಡೆಯುತ್ತಿದ್ದು, ಕೆಲವೇ ಕ್ಷಣದಲ್ಲಿ ಕಂಠೀರವ ಕ್ರೀಡಾಂಗಣದತ್ತ ಆಗಮಿಸಲಿದ್ದಾರೆ.

ಇನ್ನು ಎಐಸಿಸಿ ಅಧ್ಯಕ್ಷ ಖರ್ಗೆ ಎಸ್ ಸಿ ಪಿ ನಾಯಕ, ಮಹಾರಾಷ್ಟ್ರ ಮಾಜಿ ಸಿಎಂ ಶರದ್ ಪವಾರ್, ಮಧ್ಯಪ್ರದೇಶ ಮಾಜಿ ಸಿಎಂ ಕಮಲ್‌ನಾಥ್, ಜಮ್ಮು‌ ಕಾಶ್ಮೀರ ಮಾಜಿ ಸಿಎಂ ಫಾರೂಖ್ ಅಬ್ದುಲ್ಲಾ , ಬೆಂಗಳೂರಿಗೆ ಆಗಮಿಸಿದ್ದು ರಾಜ್ಯದ ನೂತನ ಸಿಎಂ, ಡಿಸಿಎಂ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Leave a Reply

You May Have Missed

error: Content is protected !!