ಯುವ ನಿಧಿ ಯೋಜನೆ’ಗೆ ಅರ್ಜಿ ಹಾಕಲು ಪದವೀಧರ ನಿರುದ್ಯೋಗಿಗಳು ಈ ಸೂಚನೆಗಳನ್ನು ಕಡ್ಡಾಯ ತಿಳಿದುಕೊಂಡಿರಬೇಕು

ಯುವ ನಿಧಿ ಯೋಜನೆ’ಗೆ ಅರ್ಜಿ ಹಾಕಲು ಪದವೀಧರ ನಿರುದ್ಯೋಗಿಗಳು ಈ ಸೂಚನೆಗಳನ್ನು ಕಡ್ಡಾಯ ತಿಳಿದುಕೊಂಡಿರಬೇಕು

ಕರ್ನಾಟಕ ರಾಜ್ಯ ಸರ್ಕಾರವು 2022-23ರಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ಹಾಗೂ ಡಿಪ್ಲೊಮ ನಿರುದ್ಯೋಗಿಗಳಿಗೆ ನಿರುದ್ಯೋಗ ಭತ್ಯೆ ನೀಡುವ ಸಲುವಾಗಿ ‘ಯುವ ನಿಧಿ ಯೋಜನೆ’ಯನ್ನು ಜಾರಿಗಳಿಸಿದೆ. ಈಗಾಗಲೇ ಸರ್ಕಾರವು ತಾತ್ವಿಕ ಅನುಮೋದನೆ ನೀಡಿದೆ. ಅಂದಹಾಗೆ ಈ ಯೋಜನೆಯ ಸದುಪಯೋಗ ಪಡೆಯಲು ಯಾರು ಅರ್ಹರು ಎಂಬುದನ್ನು ಅರ್ಜಿ ಹಾಕುವ ಮುನ್ನ ಅಭ್ಯರ್ಥಿಗಳು ತಿಳಿಯಬೇಕು.

ಯುವ ನಿಧಿ ಯೋಜನೆಗೆ ಅರ್ಜಿ ಹಾಕಲು ನಿಗಧಿಪಡಿಸಿದ ಮಾನದಂಡಗಳು ಹಾಗೂ ಸೂಚನೆಗಳನ್ನು ಕೆಳಗಿನಂತೆ ತಿಳಿಸಲಾಗಿದೆ.
ಯುವ ನಿಧಿ ಯೋಜನೆಗೆ ಅರ್ಜಿ ಹಾಕಲು ಮಾನದಂಡಗಳು
2023 ರ ವರ್ಷದಲ್ಲಿ ತೇರ್ಗಡೆಯಾಗಿದ್ದು, ಉತ್ತೀರ್ಣರಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿಗಳಿಗೆ (ವೃತ್ತಿಪರ ಕೋರ್ಸ್‌ಗಳು, ಸೇರಿದಂತೆ) ಮಾತ್ರ ಯುವ ನಿಧಿ ಯೋಜನೆಗೆ ಅರ್ಜಿ ಹಾಕಲು ಅವಕಾಶ ಇರುತ್ತದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ದಿನಾಂಕದಿಂದ ತಾವು ಉದ್ಯೋಗ ಸಿಗುವವರೆಗೆ ಮಾತ್ರ ಅಥವಾ ಎರಡು ವರ್ಷ ಗರಿಷ್ಠ ಅವಧಿಯ ವರೆಗೆ ಮಾತ್ರ ಯುವ ನಿಧಿ ಭತ್ಯೆ ಪಡೆಯಲು ಅವಕಾಶ ಇರುತ್ತದೆ.
ಕರ್ನಾಟಕದ ಕನ್ನಡಿಗ ಅಭ್ಯರ್ಥಿಗಳಿಗೆ ಮಾತ್ರ ಈ ಯೋಜನೆ ಅನ್ವಯವಾಗುತ್ತದೆ.
ಯುವ ನಿಧಿ ಯೋಜನೆ ಭತ್ಯೆಯನ್ನು ಡಿಬಿಟಿ ಮೂಲಕ ಒದಗಿಸಲು ಉದ್ದೇಶಿಸಿದ್ದು, ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.
ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ ಪರಿಶೀಲನೆ ಇರಬೇಕು ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು.
ಅಭ್ಯರ್ಥಿಗಳು ಅರ್ಜಿ ಹಾಕುವ ವೇಳೆ ತಾವು ಉತ್ತೀರ್ಣರಾದ ದಿನಾಂಕದಿಂದ 6 ತಿಂಗಳ ವರೆಗೆ ತಮ್ಮ ಅಧಿಕೃತ ಬ್ಯಾಂಕ್‌ ಖಾತೆಗಳ ವಹಿವಾಟು ಸ್ಟೇಟ್‌ಮೆಂಟ್‌ ಪ್ರತಿ ನೀಡಬೇಕಾಗಿರುತ್ತದೆ.

ಯೋಜನೆಗೆ ಅರ್ಜಿ ಹಾಕಲು ಯಾರು ಅರ್ಹರಲ್ಲ?

  • ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುವವರು.
  • ಶಿಶಿಕ್ಷು ವೇತನವನ್ನು ಪಡೆಯುತ್ತಿರುವವರು. ಅಂದರೆ ಯಾವುದೇ ಅಪ್ರೆಂಟಿಸ್ ಹುದ್ದೆಯಲ್ಲಿ ಇರುವವರು.
  • ಸರ್ಕಾರಿ ಮತ್ತು ಖಾಸಗಿ ವಲಯ ಉದ್ಯೋಗ ಪಡೆದಿರುವವರು.

ಯುವ ನಿಧಿ ಯೋಜನೆ ಭತ್ಯೆ ವಿವರ
ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ ರೂ.3000.
ಡಿಪ್ಲೊಮ ಪಾಸ್ ನಿರುದ್ಯೋಗಿಗಳಿಗೆ ಮಾಸಿಕ ರೂ.1500.

Leave a Reply

You May Have Missed

error: Content is protected !!