ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳು ಶರಣಾಗುವಂತೆ ಧ್ವನಿವರ್ಧಕದ ಮೂಲಕ ಘೋಷಣೆ | ಜೂ.30 ರೊಳಗೆ ಶರಣಾಗದಿದ್ದಲ್ಲಿ ಆಸ್ತಿ ಜಪ್ತಿ

ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳು ಶರಣಾಗುವಂತೆ ಧ್ವನಿವರ್ಧಕದ ಮೂಲಕ ಘೋಷಣೆ | ಜೂ.30 ರೊಳಗೆ ಶರಣಾಗದಿದ್ದಲ್ಲಿ ಆಸ್ತಿ ಜಪ್ತಿ

ಪುತ್ತೂರು: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಜೂ.30 ರೊಳಗೆ ಶರಣಾಗತಿ ಆಗದೇ ಇದ್ದಲ್ಲಿ ಆರೋಪಿಗಳ ಮನೆಯನ್ನು ಜಪ್ತಿ ಮಾಡಲಾಗುವುದು ಎಂಬ ಧ್ವನಿವರ್ಧಕ ಘೋಷಣೆ ಸುಳ್ಯ ನಗರದಲ್ಲಿ ಮಾಡಲಾಗುತ್ತಿದೆ.

ಎನ್‍ಐಎ ನ್ಯಾಯಾಲಯದ ಅಧಿಕಾರಿಗಳು ಹಾಗೂ ಸುಳ್ಯ ಪೊಲೀಸ್ ಸಿಬ್ಬಂದಿಗಳು ಈ ಘೋಷಣೆಯನ್ನು ಮಾಡುತ್ತಿದ್ದು, ಆರೋಪಿಗಳ ಸುಳಿವು ನೀಡಿದಲ್ಲಿ ನಗದು ಬಹುಮಾನವನ್ನು ನೀಡಲಾಗುವುದು ಎಂದು ಸಾರ್ವಜನಿಕರಲ್ಲಿ ವಿನಂತಿಸಲಾಗುತ್ತಿದೆ.

ಸುಳ್ಯದ ಕಲ್ಲುಮುಟ್ಲುವಿನಲ್ಲಿ ವಾಸವಿದ್ದ ಆರೋಪಿ ಉಮ್ಮರ್ ಫಾರೂಕ್ ಅವರ ಮನೆಗೂ ಹೋಗಿ ನ್ಯಾಯಾಲಯದ ಆದೇಶ ಪ್ರತಿಯನ್ನು ಅಂಟಿಸಿ ಬರಲಾಗಿದೆ. ನಿನ್ನೆ ಬೆಳ್ಳಾರೆಯಲ್ಲೂ ಧ್ವನಿವರ್ಧಕದ ಮೂಲಕ ಉದ್ಘೋಷಣೆ ಮಾಡಿ ಆರೋಪಿ ಮುಸ್ತಫ ಅವರ ಮನೆಗೂ ಆದೇಶ ಪ್ರತಿ ಅಂಟಿಸಲಾಗಿದೆ.

Leave a Reply

You May Have Missed

error: Content is protected !!