ಮಾಜಿ ಸಚಿವ ವಿನಯ ಕುಮಾರ್ ಸೊರಕೆ ತಾಯಿ ನಿಧನ

ಮಾಜಿ ಸಚಿವ ವಿನಯ ಕುಮಾರ್ ಸೊರಕೆ ತಾಯಿ ನಿಧನ

ಪುತ್ತೂರು: ಮಾಜಿ ನಗರಾಭಿವೃದ್ಧ ಸಚಿವ ವಿನಯ ಕುಮಾರ್ ಸೊರಕೆ ಅವರ ತಾಯಿ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಸೊರಕೆ ನಿವಾಸಿ ದಿ.ಅಚ್ಚುತ ಪೂಜಾರಿ ಅವರ ಪತ್ನಿ ಸುನೀತಿ(92) ಅಲ್ಪಕಾಲದ ಅಸೌಖ್ಯದಿಂದ ಶನಿವಾರ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪುತ್ರರಾದ ಕೃಷಿಕ ಅಶೋಕ್ ಕುಮಾರ್ ಸೊರಕೆ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮುಂಡೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಕುಮಾರ್ ಸೊರಕೆ, ಪುತ್ರಿ ಶಶಿಕಲಾ ಶರತ್ ಮತ್ತು ಮೊಮ್ಮಕ್ಕಳು ಹಾಗೂ ಮರಿ ಮಕ್ಕಳನ್ನು ಅಗಲಿದ್ದಾರೆ.

Leave a Reply

You May Have Missed

error: Content is protected !!