ಯುವಕನೋರ್ವ ಸೈನೆಡ್ ಸೇವಿಸಿ ಆತ್ಮಹತ್ಯೆ

ಯುವಕನೋರ್ವ ಸೈನೆಡ್ ಸೇವಿಸಿ ಆತ್ಮಹತ್ಯೆ

ಪೂಂಜಾಲಕಟ್ಟೆ: ಯುವಕನೋರ್ವ ಸೈನೆಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾದ ಘಟನೆ ಪೂಂಜಾಲಕಟ್ಟೆಯಲ್ಲಿ ಗುರುವಾರ ನಡೆದಿರುವ ಬಗ್ಗೆ ವರದಿಯಾಗಿದೆ.
ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ನಿವಾಸಿ ರೂಪೇಶ್ ಆಚಾರ್ಯ ಮೃತಪಟ್ಟವರು.
ಚಿನ್ನದ ಕುಸುರಿ ಕೆಲಸಗಾರರಾಗಿದ್ದ ರೂಪೇಶ್ ಅವರು ಸ್ಥಳೀಯ ಸಂಸ್ಥೆಯೊಂದರಲ್ಲಿ ನೌಕರರಾಗಿದ್ದು ಇತ್ತೀಚೆಗೆ ಕೆಲಸ ಬಿಟ್ಟಿದ್ದರು. ಮದ್ಯ ವ್ಯಸನಿಯಾಗಿದ್ದ ಅವರು ಗುರುವಾರ ಮಧ್ಯಾಹ್ನ ತನ್ನ ಮನೆಯ ಕೊಠಡಿಯಲ್ಲಿ ಸೈನೆಡ್ ಸೇವಿಸಿದ್ದರು ಎನ್ನಲಾಗಿದ್ದು, ಇದನ್ನು ಗಮನಿಸಿದ ಮನೆ ಮಂದಿ ಕೂಡಲೇ ಅಂಬ್ಯುಲೆನ್ಸ್ ಮೂಲಕ ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಿದರಾದರೂ ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ರೂಪೇಶ್ ವಿವಾಹಿತನಾಗಿದ್ದು, ಪತ್ನಿ ಮತ್ತು ಪುಟ್ಟ ಮಗುವನ್ನು ಅಗಲಿದ್ದಾರೆ.

Leave a Reply

You May Have Missed

error: Content is protected !!