ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್; ಶಾಲಾ-ಕಾಲೇಜುಗಳಿಗೆ ಜು.25 ರಂದು ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್; ಶಾಲಾ-ಕಾಲೇಜುಗಳಿಗೆ ಜು.25 ರಂದು ರಜೆ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ (ಜುಲೈ 25) ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಮುಂಜಾಗೃತಾ ಕ್ರಮವಾಗಿ ಜಿಲ್ಲಾದ್ಯಂತ ಅಂಗನವಾಡಿಯಿಂದ ಪದವಿ ಕಾಲೇಜುಗಳ ವರೆಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
ಸೋಮವಾರ ಸುಬ್ರಹ್ಮಣ್ಯ ಪರಿಸರದಲ್ಲಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದ ಕಾರಣ ಪದವಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಲು ಪರದಾಡಿದರು.
ಪ್ರವಾಸಿಗರು ನದಿ, ಸಮುದ್ರದ ತೀರಗಳಿಗೆ ತೆರಳಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೆ ಮಾಡಲು ಆದೇಶ ನೀಡಲಾಗಿದೆ.

Leave a Reply

You May Have Missed

error: Content is protected !!