ಧರ್ಮಸ್ಥಳ: ಆಟೋ ಚಾಲಕನ ಮೇಲೆ ಅಪರಿಚಿತ ಯುವಕರ ತಂಡದಿಂದ ಹಲ್ಲೆ

ಧರ್ಮಸ್ಥಳ: ಆಟೋ ಚಾಲಕನ ಮೇಲೆ ಅಪರಿಚಿತ ಯುವಕರ ತಂಡದಿಂದ ಹಲ್ಲೆ

ಧರ್ಮಸ್ಥಳ: ಯುವತಿಯನ್ನು ಡ್ರಾಪ್ ಮಾಡಿದ್ದಕ್ಕೆ ಆಟೋ ಚಾಲಕನ ಮೇಲೆ ಹಲ್ಲೆ ನಡೆದ ಘಟನೆ ಧರ್ಮಸ್ಥಳ ಬಸ್ ನಿಲ್ದಾಣದ ಬಳಿ ನಡೆದಿದೆ.

ಆಟೋ ಚಾಲಕನನ್ನು ಉಜಿರೆ ಗ್ರಾಮದ ಅತ್ತಾಜೆ ನಿವಾಸಿ ಅಬ್ದುಲ್ ಹಮೀದ್ ಎಂದು ಗುರುತಿಸಲಾಗಿದೆ.

ಬೆಂಗಳೂರಿನ ನಿವಾಸಿ ಹಿಂದೂ ವಿದ್ಯಾರ್ಥಿನಿಯೊಬ್ಬಳು ಉಜಿರೆ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು ಕಳೆದ ವಾರ ಕಾಲೇಜು ಕೊನೆಗೊಂಡಿದ್ದು, ಆ.02ರಂದು ತನ್ನ ಊರಾದ ಬೆಂಗಳೂರಿಗೆ ತೆರಳಲು ರಾತ್ರಿ ಉಜಿರೆಯಿಂದ ಪರಿಚಯಸ್ಥ ಅನ್ಯಕೋಮಿನ ಆಟೋ ಚಾಲಕನಿಗೆ ಕರೆ ಮಾಡಿದ್ದಳು. ಆತ ಬಂದು ಉಜಿರೆಯಿಂದ ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ರಾತ್ರಿ ಸುಮಾರು 9 ಗಂಟೆಗೆ ಅವಳನ್ನು ಡ್ರಾಪ್ ಮಾಡಿ ಹಿಂದಿರುಗುವಾಗ ಅಪರಿಚಿತ ಯುವಕರ ತಂಡವೊಂದು ನಿನಗೆ ಹಿಂದೂ ಯುವತಿಯರೇ ಬೇಕಾ ಎಂದು ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾರೆ.

ಆಟೋ ಚಾಲಕ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧರ್ಮಸ್ಥಳ ಸಬ್ ಇನ್ಸ್ ಪೆಕ್ಟರ್ ಅನಿಲ್ ಕುಮಾರ್ ಮತ್ತು ತಂಡ ಆರೋಪಿಗಳ ಪತ್ತೆಗೆ ಧರ್ಮಸ್ಥಳ ಸುತ್ತಮುತ್ತಲಿನ ಸಿಸಿಕ್ಯಾಮರಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

You May Have Missed

error: Content is protected !!