ಬಹುಮಹಡಿ ಕಟ್ಟಡದಿಂದ ಕೆಳಕ್ಕೆ ಹಾರಿ ಉದ್ಯಮಿ ಆತ್ಮಹತ್ಯೆ..!

ಬಹುಮಹಡಿ ಕಟ್ಟಡದಿಂದ ಕೆಳಕ್ಕೆ ಹಾರಿ ಉದ್ಯಮಿ ಆತ್ಮಹತ್ಯೆ..!

ಉದ್ಯಮಿಯೋರ್ವರು ಬಹುಮಹಡಿ ಕಟ್ಟಡದಿಂದ ಕೆಳಕ್ಕೆ ಹಾರಿ ಆತ್ಮಹತ್ಯೆ ಗೈದ ಘಟನೆ ಮಂಗಳೂರು ನಗರದ ಬೆಂದೂರ್‌ವೆಲ್ ಬಳಿ ಭಾನುವಾರ ನಡೆದಿದೆ.

ನಗರದ ಬಿಲ್ಡರ್, ಯುವ ಉದ್ಯಮಿ ಮೋಹನ್ ಅಮೀನ್(48) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾರೆ.

ಬಹುಮಹಡಿ ಕಟ್ಟಡದ 14 ನೇ ಮಹಡಿಯಿಂದ ಇಂದು ಮುಂಜಾನೆ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಆತ್ಮಹತ್ಯೆಗೆ ಸ್ಪಷ್ಟ ಕಾರಣಗಳು ತಿಳಿದು ಬಂದಿಲ್ಲ.
ಕದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಂಡಿದ್ದಾರೆ.

Leave a Reply

You May Have Missed

error: Content is protected !!