ಚೂರಿ ಇರಿತಕ್ಕೊಳಗಾಗಿ ಮೃತಪಟ್ಟ ಗೌರಿ ನಿವಾಸಕ್ಕೆ ಕೇಂದ್ರ ಸಚಿವ ಭಗವಂತ್ ಖೂಬಾ, ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

ಚೂರಿ ಇರಿತಕ್ಕೊಳಗಾಗಿ ಮೃತಪಟ್ಟ ಗೌರಿ ನಿವಾಸಕ್ಕೆ ಕೇಂದ್ರ ಸಚಿವ ಭಗವಂತ್ ಖೂಬಾ, ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಬಳಿ ಚೂರಿ ಇರಿತಕ್ಕೊಳಗಾಗಿ ಮೃತಪಟ್ಟ ಅಳಿಕೆ ಗ್ರಾಮದ ಕುದ್ದುಪದವು ಆದಾಳ ನಿವಾಸಿ ಯುವತಿ ಗೌರಿ ಅವರ ಮನೆಗೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ, ಇಂಧನ ಖಾತೆ ಸಚಿವ ಭಗವಂತ್ ಖೂಬಾ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಶುಕ್ರವಾರ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಆಕೆಯ ಕುಟುಂಬದವರಿಗೆ ಸಾಂತ್ವಾನ ಹೇಳಿ ಆರ್ಥಿಕ ನೆರವು ನೀಡಿದರು.
ಈ ಸಂದರ್ಭದಲ್ಲಿ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ಪದ್ಮನಾಭ ಕೊಟ್ಟಾರಿ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಜಿಲ್ಲಾ ಕಾರ್ಯದರ್ಶಿ ರಂದಿಪ್, ವಿಟ್ಲ ಪಟ್ಟಣ ಪಂಚಾಯತ್‌ನ ಅರುಣ್ ವಿಟ್ಲ ಸಹಿತ ಹಲವು ಮಂದಿ ಜೊತೆಗಿದ್ದರು.

Leave a Reply

You May Have Missed

error: Content is protected !!