ಕಾಡಾನೆ ದಾಳಿಗೊಳಗಾಗಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಮೃತ್ಯು

ಆಲೂರು ಸಮೀಪ ಹಳ್ಳಿಯೂರಿನ ಸಮೀಪ ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡಿರುವ ಸಿಬ್ಬಂದಿ ವೆಂಕಟೇಶ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಗುರುವಾರ ಬೆಳಗ್ಗೆ ಗಾಯಗೊಂಡು ತಿರುಗಾಡುತಿದ್ದ ಭೀಮ ಹೆಸರಿನ ಕಾಡಾನೆಗೆ ಹೆಚ್ಚಿನ ಚಿಕಿತ್ಸೆ ನೀಡಲು ಮುಂದಾಗಿದ್ದ ಸಂದರ್ಭದಲ್ಲಿ ವೆಂಕಟೇಶ್ ಮೇಲೆ ಆನೆ ದಾಳಿ ನಡೆಸಿದೆ. ಗಂಭೀರ ಗಾಯಗೊಂಡಿದ್ಧ ವೆಂಕಟೇಶ್ ನನ್ನು ತಕ್ಷಣ ಹಾಸನದ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಹಾಸನ ಅರಣ್ಯ ವಿಭಾಗದ ಆಲೂರು, ಬೇಲೂರು. ಯಸಳೂರು. ಸಕಲೇಶಪುರ ಮತ್ತು ಅರಕಲಗೂಡು ವಲಯ ವ್ಯಾಪ್ತಿಯಲ್ಲಿ ಸಂಚರಿಸುತ್ತಿದ್ದ ಭೀಮ ಕಾಡಾನೆಗೆ ಇತರೆ ಕಾಡಾನೆಗಳು ಆಗಸ್ಟ್ ಎರಡನೇ ವಾರದಲ್ಲಿ ದಾಳಿ ಮಾಡಿರುವುದರಿಂದ ತೀವ್ರವಾಗಿ ಗಾಯಗೊಂಡಿತ್ತು. ಕಾಡಾನೆಗೆ ಆ.25 ರಂದು ಚಿಕಿತ್ಸೆ ನೀಡಲಾಗಿದ್ದು, ಗಾಯಗಳು ವಾಸಿಯಾಗದೇ ಉಲ್ಬಣಗೊಂಡಿರುವುದರಿಂದ ಹೆಚ್ಚಿನ ಚಿಕಿತ್ಸೆ ನೀಡುವ ಕಾರ್ಯಾಚರಣೆ ಕೈಗೊಳ್ಳಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ವನ್ಯಜೀವಿ) ಅನುಮತಿ ನೀಡಿದ್ದರು.


















Leave a Reply