ಯುವಕನಿಗೆ ಚೂರಿ ಇರಿತ ಪ್ರಕರಣ; ಮೂವರ ಬಂಧನ

ಯುವಕನಿಗೆ ಚೂರಿ ಇರಿತ ಪ್ರಕರಣ; ಮೂವರ ಬಂಧನ

ಸುರತ್ಕಲ್‌: ಇಲ್ಲಿನ ಕಳವಾರು ಬಳಿ ರವಿವಾರ ಸಂಜೆ ಯುವಕನೋರ್ವನ ಮೇಲೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಕಳವಾರು ಬೆಂಕಿನಾಥೇಶ್ವರ ದೇವಸ್ಥಾನ ಬಳಿಯ ನಿವಾಸಿ ಪ್ರಶಾಂತ್‌ ಯಾನೆ ಪಚ್ಚು(28), ಕಳವಾರು ಆಶ್ರಯಕಾಲನಿ ನಿವಾಸಿ ಧನರಾಜ್(23) ಮತ್ತು ಕಳವಾರು ಚರ್ಚ್‌ ಗುಡ್ಡೆ ಸೈಟ್‌ ನಿವಾಸಿ ಯಜ್ಞೇಶ್‌(22) ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಇನ್ನೂ ಕೆಲವು ಆರೋಪಿಗಳಿದ್ದು, ಉಳಿದವರಿಗಾಗಿ ಸುರತ್ಕಲ್‌ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

You May Have Missed

error: Content is protected !!