ಬಸ್‌ನಲ್ಲಿ ಅನುಚಿತ ವರ್ತನೆ; ಬಂಧನ

ಬಸ್‌ನಲ್ಲಿ ಅನುಚಿತ ವರ್ತನೆ; ಬಂಧನ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ವ್ಯಕ್ತಿಯೋರ್ವರು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಬಗ್ಗೆ ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬುಧವಾರ ಪುತ್ತೂರಿನಿಂದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ತನ್ನ ಪಕ್ಕದಲ್ಲಿದ್ದ ವ್ಯಕ್ತಿಯೋರ್ವ ಅನುಚಿತವಾಗಿ ವರ್ತಿಸಿ ಬಸ್‌ನಿಂದ ಇಳಿಯುವ ವೇಳೆ ಚೀಟಿಯೊಂದರಲ್ಲಿ ಮೊಬೈಲ್‌ ನಂಬರನ್ನು ನೀಡಿ ಕರೆ ಮಾಡುವಂತೆ ಕೈ ಸನ್ನೆ ಮಾಡಿದ್ದಾಗಿ ಮಹಿಳೆ ಸಾಮಾಜಿಕ ಜಾಲತಾಣ (ಎಕ್ಸ್‌)ದಲ್ಲಿ ಪೋಸ್ಟ್‌ ಮಾಡಿ ಪೊಲೀಸ್‌ ಅಧಿಕಾರಿಗಳಿಗೂ ಟ್ಯಾಗ್‌ ಮಾಡಿದ್ದರು.

ಇದಕ್ಕೆ ಸ್ಪಂದಿಸಿದ ಪೊಲೀಸ್‌ ಅಧಿಕಾರಿಗಳು ಪ್ರಕರಣದ ಬಗ್ಗೆ ತನಿಖೆಗೆ ಬೆಳ್ಳಾರೆ ಪೊಲೀಸರಿಗೆ ನಿರ್ದೇಶನ ನೀಡಿದ್ದರು. ಪೊಲೀಸರು ಮಹಿಳೆಯನ್ನು ಸಂಪರ್ಕಿಸಿ ದೂರು ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮೂಲತಃ ಕಾಸರಗೋಡಿನ ವಿಷ್ಣು ಮೋಹನ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave a Reply

You May Have Missed

error: Content is protected !!