ಕೊಕ್ಕಡ ಗ್ರಾಮ ಪಂಚಾಯತ್ ಗೆ ಸರಕಾರದ ಅಧೀನ ಕಾರ್ಯದರ್ಶಿ ವಿಕಾಸ್ ಶ್ರೀವಾಸ್ತವ್ ಬೇಟಿ

ಕೊಕ್ಕಡ ಗ್ರಾಮ ಪಂಚಾಯತ್ ಗೆ ಸರಕಾರದ ಅಧೀನ ಕಾರ್ಯದರ್ಶಿ ವಿಕಾಸ್ ಶ್ರೀವಾಸ್ತವ್ ಬೇಟಿ

ಕೊಕ್ಕಡ ಗ್ರಾಮ ಪಂಚಾಯತ್ ಗೆ ಸರಕಾರದ ಅಧೀನ ಕಾರ್ಯದರ್ಶಿ, ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವಿಕಾಸ್ ಶ್ರೀವಾಸ್ತವ್ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ನ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಬಳಿ ಗೋ ಶಾಲೆಯ ಗೋಬರ್ ಧನ್ ಘಟಕವನ್ನು ಪರಿಶೀಲಿಸಿ ಘಟಕದ ಕಾರ್ಯನಿರ್ವಹಣೆಯ ಬಗ್ಗೆ ಮೆಚ್ಚಗೆ ವ್ಯಕ್ತಪಡಿಸಿದರು, ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಬೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಬೇಬಿ, ಉಪಾಧ್ಯಕ್ಷರಾದ ಪ್ರಭಾಕರ ಗೌಡ, ಕಾರ್ಯನಿರ್ವಹಣಾಧಿಕಾರಿಯಾದ ಕುಸುಮಾಧರ್, ನಿತಿನ್ ಕುಮಾರ್, ಸಹಾಯಕ ಇಂಜಿನಿಯರ್ ಹರ್ಷಿತ್, ಜಿಲ್ಲಾ ಸಂಯೋಜಕರಾದ ಡೊಂಬಯ್ಯ, ಕಾರ್ಯನಿರ್ವಹಣಾಧಿಕಾರಿ ದಯಾನಂದ ಹೆಗ್ಡ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್.ಎಂ, ಕುಶಾಲಪ್ಪ ಗೌಡ ಪೂವಾಜೆ, ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!