ಕಡಬ ಸೈಂಟ್ ಆನ್ಸ್ ವಿದ್ಯಾರ್ಥಿಗಳು ಕಬ್ಬಡಿಯಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ

ಕಡಬ ಸೈಂಟ್ ಆನ್ಸ್ ವಿದ್ಯಾರ್ಥಿಗಳು ಕಬ್ಬಡಿಯಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಲಿಟಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಪುತ್ತೂರು ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 14ರ ವಯೋಮಾನದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡವು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಸಲೀತ್, ರಿಝ್ವಾನ್, ನಿರ್ಭಯ್, ಕೌಶಿಕ್ ಈ ವಿದ್ಯಾರ್ಥಿಗಳು ಮೈಸೂರ್ ವಿಭಾಗ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ವಂ.ಫಾ .ಅಮಿತ್ ಪ್ರಕಾಶ್ ರೋಡ್ರಿಗಸ್ ಹಾಗೂ ಸಂಸ್ಥೆಯ ಸಂಚಾಲಕರಾದ ವಂ.ಫಾ ಪೌಲ್ ಪ್ರಕಾಶ್ ಡಿ ಸೋಜಾ ಇವರು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸಮದ್ ಎ. ಎಸ್, ಅರುಣ್ ಕುಮಾರ್ ಹಾಗೂ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Leave a Reply

You May Have Missed

error: Content is protected !!