ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ- ನಾಲ್ವರು ಸ್ಥಳದಲ್ಲೇ ಸಾವು

ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ- ನಾಲ್ವರು ಸ್ಥಳದಲ್ಲೇ ಸಾವು

ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ನಡೆದಿದೆ.

ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಹಾಸನ ಕಡೆಯುಂದ ಬರುತ್ತಿದ್ದ ಸ್ವಿಫ್ಟ್ ಕಾರು ಮುಂದೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಇದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರನ್ನು ಬೆಂಗಳೂರಿನ ಬೆಂಡಿಗನಹಳ್ಳಿಯ ನಮಿತಾ, ರಾಜಸ್ಥಾನ ಮೂಲದ ಪಂಕಜ್ ಶರ್ಮಾ, ಬೆಂಗಳೂರಿನ ವಂಶಿ ಕೃಷ್ಣ, ಧಾರವಾಡದ ರಘುನಾಥ್ ಎಂದು ಗುರುತಿಸಲಾಗಿದೆ. ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

You May Have Missed

error: Content is protected !!