ಗಂಡಿಬಾಗಿಲು ಸಿಯೋನ್‍ ಆಶ್ರಮದಲ್ಲಿ ಉಚಿತ ವೈದ್ಯಕೀಯ ಶಿಬಿರ

ಗಂಡಿಬಾಗಿಲು ಸಿಯೋನ್‍ ಆಶ್ರಮದಲ್ಲಿ ಉಚಿತ ವೈದ್ಯಕೀಯ ಶಿಬಿರ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಅ.08ರಂದು ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಜ್ಯೋತಿ ಬೆಳಗಿಸುವುದರ ಮೂಲಕ ಶಿಬಿರವನ್ನು ಉದ್ಘಾಟಿಸಲಾಯಿತು. ಡಾ.ಸುಪ್ರಿತಾ ದಂತವೈದ್ಯರು, ಡಾ.ಶಿರಸ್ ವೈದ್ಯಕೀಯ ಅಧಿಕಾರಿ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ, ಹಾಗೂ ಯೆನಪೋಯ ಆಸ್ಪತ್ರೆಯ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು.

150ಕ್ಕೂ ಅಧಿಕ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು. ಸಿಯೋನ್ ಆಶ್ರಮದ ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ., ಆಡಳಿತಾಧಿಕಾರಿ ಶ್ರೀಮತಿ ಶೋಭಾ ಯು.ಪಿ., ಆಡಳಿತ ಮಂಡಳಿಯವರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!