ಕಾರು-ಲಾರಿ ಅಪಘಾತ: ಹಲವು ಮಂದಿಗೆ ಗಾಯ

ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಹಲವು ಮಂದಿ ಗಾಯಗೊಂಡ ಘಟನೆ ಚಾರ್ಮಾಡಿ ಘಾಟಿಯ ಎರಡು ಹಾಗೂ ಮೂರನೇ ತಿರುವಿನ ನಡುವೆ ಮಂಗಳವಾರ ಸಂಜೆ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯರ ಸಹಕಾರದೊಂದಿಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಿಂದಾಗಿ ಘಾಟಿಯಲ್ಲಿ ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಬೆಳ್ತಂಗಡಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
















Leave a Reply