ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ

ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ

ಉಡುಪಿಗೆ ಹೋಗಿ ಬರುವುದಾಗಿ ತಿಳಿಸಿ ವಾಪಾಸು ಮನೆಗೆ ಬಾರದೆ ಕಾಣೆಯಾಗಿದ್ದ ಯವತಿಯ ಶವ ಶಿರ್ವ ಪೊಲೀಸ್‌ ಠಾಣಾ ವ್ಯಾಪ್ತಿಯ ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಸೇತುವೆಯ ಬಳಿ ಪಾಪನಾಶಿನಿ ನದಿಯ ಗುಂಡಿಯಲ್ಲಿ ಆ.13ರ ಶುಕ್ರವಾರ ಪತ್ತೆಯಾಗಿದೆ.

ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ಸದಾಶಿವ ಪೂಜಾರಿ ಅವರ ಪುತ್ರಿ ವಿನಿತಾ (22) ಅ. 9ರಂದು ಮಧ್ಯಾಹ್ನ 3 ಗಂಟೆಗೆ ತನ್ನ ಮನೆಯಿಂದ ಹೋದವರು ಕಾಣೆಯಾದ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಿ.ಕಾಂ. ಪದವೀಧರೆಯಾಗಿದ್ದ ಆಕೆ ಉಡುಪಿ ಎಂಜಿಎಂ ಕಾಲೇಜ್‌ ಬಳಿಯ ಎಲೆಕ್ಟ್ರಿಕಲ್‌ ಬೈಕ್‌ ಶೋರೂಂನಲ್ಲಿ ಸುಮಾರು 4 ತಿಂಗಳಿನಿಂದ ಕೆಲಸ ಮಾಡಿಕೊಂಡಿದ್ದು, ವಾರದ ಹಿಂದೆ ಕೆಲಸಬಿಟ್ಟಿದ್ದರು. ಮಾನಸಿಕವಾಗಿ ನೊಂದಿದ್ದ ಈಕೆ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿರಬೇಕೆಂದು ಶಂಕಿಸಲಾಗಿದ್ದು, ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮಲ್ಪೆಯ ಮುಳುಗು ತಜ್ಞ ಈಶ್ವರ್‌ ಮಲ್ಪೆ ಕೊಳೆತ ಶವವನ್ನು ನದಿಯಿಂದ ಮೇಲಕ್ಕೆತ್ತಿದ್ದು, ಮರಣೋತ್ತರ ಶವ ಪರೀಕ್ಷೆ ನಡೆಸಲು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಶಿರ್ವ ಪೊಲೀಸ್‌ ಠಾಣಾಧಿಕಾರಿ ಸಕ್ತಿವೇಲು ಮತ್ತು ಕ್ರೈಂ ವಿಭಾಗದ ಪಿಎಸ್‌ಐ ಅನಿಲ್‌ ಕುಮಾರ್‌ ಸ್ಥಳದಲ್ಲಿದ್ದು ತನಿಖೆ ಮುಂದುವರಿಸಿದ್ದಾರೆ.

Previous post

ಪುತ್ತೂರಿನ ಸಂತ ಫಿಲೋಮಿನಾ ಕಾಲೇಜ್‍ನ ಎನ್.ಸಿ.ಸಿ. ಅಧಿಕಾರಿ ಲೆಫ್ಟಿನೆಂಟ್ ಜೊನ್ಸನ್ ಡೇವಿಡ್ ಸಿಕ್ವೇರ ಎನ್.ಸಿ.ಸಿ ಕ್ಯಾಪ್ಟನ್ ಪದವಿಗೆ ಭಡ್ತಿ

Next post

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಎನ್ನೆನ್ನೆಸ್ ವಾರ್ಷಿಕ ಶಿಬಿರಕ್ಕೆ ವಿಭಾಗಾಧಿಕಾರಿ ಭೇಟಿ

Leave a Reply

You May Have Missed

error: Content is protected !!