ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಎರಡು ಟಿಪ್ಪರ್ ಲಾರಿಗಳು ಪೊಲೀಸ್ ವಶ

ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಎರಡು ಟಿಪ್ಪರ್ ಲಾರಿಗಳು ಪೊಲೀಸ್ ವಶ

ಅಕ್ರಮವಾಗಿ‌ ಮರಳು ಸಾಗಾಟ ಮಾಡುತ್ತಿದ್ದ ಎರಡು ಟಿಪ್ಪರ್ ಲಾರಿಗಳನ್ನು ಬಜ್ಪೆ ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ.

ವಶಕ್ಕೆ ಪಡೆದ ಲಾರಿಗಳ‌ ಒಟ್ಟು ಮೌಲ್ಯ 5ಲಕ್ಷ ರೂ. ರಂದು ಅಂದಾಜಿಸಲಾಗಿದೆ. ಮಂಗಳೂರು ತಾಲೂಕಿನ ಮೂಳೂರು ಗ್ರಾಮದ ಗುರುಪುರ ಎಂಬಲ್ಲಿ ಅಕ್ರಮವಾಗಿ ಮರಳು ತೆಗೆದು ಸಾಗಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿಯ ಮೇರೆಗೆ ಬಜ್ಪೆ ಪೊಲೀಸರು ದಾಳಿ ಮಾಡಿದ್ದಾರೆ.

ಈ ವೇಳೆ ಲಾರಿಯ ಚಾಲಕರು ಲಾರಿಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಬಜ್ಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸಂದೀಪ್, ಪಿಎಸ್ಸೈಗಳಾದ ಗುರಪ್ಪ ಕಾಂತಿ, ರೇವಣಸಿದ್ದಪ್ಪ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

Previous post

ನ್ಯಾಯತರ್ಪು : ಸಿಡಿಲು ಬಡಿದು 3 ಮನೆಗಳಿಗೆ ಹಾನಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Next post

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಎನ್ನೆನ್ನೆಸ್ ವಾರ್ಷಿಕ ವಿಶೇಷ ಶಿಬಿರದಲ್ಲಿ ‘ಜೀವ ಜಗತ್ತಿನ ವಿಸ್ಮಯಗಳು’ ಎನ್ನುವ ವಿಶೇಷ ಕಾರ್ಯಕ್ರಮ

Leave a Reply

You May Have Missed

error: Content is protected !!