ವಿದ್ಯಾರ್ಥಿನಿ ನಿಶಾ ಸಮುದ್ರದಲ್ಲಿ ಮುಳುಗಿ ಮೃತ್ಯು!

ವಿದ್ಯಾರ್ಥಿನಿ ನಿಶಾ ಸಮುದ್ರದಲ್ಲಿ ಮುಳುಗಿ ಮೃತ್ಯು!

ಬೀಚಿಗೆ ತೆರಳಿದ್ದ ವಿದ್ಯಾರ್ಥಿಗಳಲ್ಲಿ ಓರ್ವ ವಿದ್ಯಾರ್ಥಿನಿ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚಿನಲ್ಲಿ ನಡೆದಿದೆ.

ಮೃತರನ್ನು ನೇಪಾಳ ಮೂಲದ ವಿಟ್ಲದಲ್ಲಿದ್ದ ನಿಶಾ (15) ಎಂದು ಗುರುತಿಸಲಾಗಿದೆ.

ವಿಟ್ಲ ಮೂಲದ ದಿಗಂತ (15), ದಿವ್ಯರಾಜ್ (15), ತೇಜಸ್ (14), ಕೀರ್ತನ್ (16), ಅಶ್ಮಿತಾ (15), ನಿಶಾ (15) ಇವರೆಲ್ಲರೂ ಕುಳಾಯಿ ಚಿತ್ರಾಪುರ ಬೀಚ್ ಗೆ ನೀರಲ್ಲಿ ಆಟ ಆಡಲು ತೆರಳಿದ್ದರು. ಆಡವಾಡುತ್ತಿದ್ದಾಗ ನೀರಿನ ಅಲೆಯ ರಭಸಕ್ಕೆ ಮುಳುಗಿದ್ದು, ಹತ್ತಿರದ ಮೀನುಗಾರರು ಮತ್ತು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

ನಾಲ್ಕು ಜನ ಆರೋಗ್ಯವಾಗಿದ್ದು, ತೇಜಸ್ ಎಂಬ ಬಾಲಕನನ್ನು ಮುಕ್ಕ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ನಿಶಾ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Previous post

YouTube ನಂಬಲರ್ಹ ಸುದ್ದಿ ವಾಹಿನಿಗಳಿಗಾಗಿ ವಾಚ್‌ಪೇಜ್‌-ಮುಂದಿನ ತಿಂಗಳು ಹೊಸ ವ್ಯವಸ್ಥೆ ಶುರು

Next post

ಅರಣ್ಯ ಭೂಮಿ ಒತ್ತುವರಿ, ಅರಣ್ಯಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿ; ಶಾಸಕ ಹರೀಶ್ ಪೂಂಜಾ ವಿರುದ್ದ ಈಶ್ವರ್ ಖಂಡ್ರೆಗೆ ದೂರು

Leave a Reply

You May Have Missed

error: Content is protected !!