ಕಡಬ ಸೈಂಟ್ ಜೋಕಿಮ್ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ

ಕಡಬ ಸೈಂಟ್ ಜೋಕಿಮ್ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ

ಕಡಬ ಸೈಂಟ್ ಜೋಕಿಮ್ ಪ್ರೌಢಶಾಲೆಯಲ್ಲಿ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ನಡೆದ ಕಡಬ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿಯನ್ನು ನಡೆಯಿತು.

ಕಾರ್ಯಕ್ರಮವನ್ನು ದೀಪ ಪ್ರಜ್ವಲನೆ ಮೂಲಕ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಲೋಕೇಶ್ ಎಸ್ ಆರ್ ಉದ್ಘಾಟಿಸಿ, ಅವರು “ವಿದ್ಯಾರ್ಥಿಗಳಲ್ಲಿ ಹುದುಗಿರುವ ಸುಪ್ತ ಪ್ರತಿಭೆ ಬೆಳಕಿಗೆ ಬಂದು ಕಾರಂಜಿಯಾಗಿ ಚಿಮ್ಮಲು, ಶಿಕ್ಷಣ ಇಲಾಖೆ ಕಲ್ಪಿಸಿದ ಉತ್ತಮ ವೇದಿಕೆ ಪ್ರತಿಭಾ ಕಾರಂಜಿಯಾಗಿದೆ, ಮಕ್ಕಳ ಭವಿಷ್ಯ ಇದರಿಂದ ಉಜ್ವಲ ಗೊಳ್ಳಲಿ” ಎಂದು ಶುಭ ಹಾರೈಸಿದರು.

ಸೈಂಟ್ ಜೋಕಿಮ್ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ವಂ.ಪಾವ್ಲ್ ಪ್ರಕಾಶ್ ಡಿಸೋಜ ಅಧ್ಯಕ್ಷತೆಯನ್ನು ವಹಿಸಿ ಶುಭಾಶಯ ಕೋರಿದರು. ಪುತ್ತೂರು ಇ.ಸಿ.ಓ ಹರಿಪ್ರಸಾದ್, ಕಡಬ ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶಾಂತರಾಮ ಓಡ್ಲ, ಕಡಬ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ರಾಮಕೃಷ್ಣ ಮಲ್ಲಾರ , ಸೈಂಟ್ ಜೋಕಿಮ್ ಚರ್ಚ್ ಪಾಲನಾ ಮಂಡಳಿಯ ಕಾರ್ಯದರ್ಶಿ ಶ್ರೀಮತಿ ಜೆಸಿಂತಾ ವೇಗಸ್, ರಕ್ಷಕ ಶಿಕ್ಷಕ ಸಮಿತಿಯ ಉಪಾಧ್ಯಕ್ಷರುಗಳಾದ ಸತೀಶ್ ನಾಯ್ಕ್ , ಬಾಲಕೃಷ್ಣ ಗೌಡ ಬಿ, ಶ್ರೀಹರಿಪ್ರಸಾದ್ ಗೌಡ, ಸೈಂಟ್ ಅನ್ಸ್ ಶಾಲಾ ಪ್ರಾಂಶುಪಾಲರಾದ ವಂ. ಅಮಿತ್ ಪ್ರಕಾಶ್ ರೋಡ್ರಿಗಸ್, ಸೈಂಟ್ ಜೋಕಿಮ್ ಕಾಲೇಜು ಪ್ರಾಚಾರ್ಯರಾದ ಕಿರಣ್ ಕುಮಾರ್, ಸೈಂಟ್ ಜೋಕಿಮ್ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಹಿಲ್ಡಾ ರೋಡ್ರಿಗಸ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಡಬ ಕ್ಷೇತ್ರ ಸಂಪನ್ಮೂಲ ಅಧಿಕಾರಿ ಗೋವಿಂದ ನಾಯ್ಕ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಸೈಂಟ್ ಜೋಕಿಮ್ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶ್ರೀಲತಾ ವಂದನಾರ್ಪಣೆ ನೆರವೇರಿಸಿದರು. ಸೈಂಟ್ ಜೋಕಿಮ್ ಕಾಲೇಜು ಉಪನ್ಯಾಸಕ ರಾಜೇಶ್.ಎನ್ ಕಾರ್ಯಕ್ರಮ ನಿರೂಪಿಸಿದರು.

Leave a Reply

You May Have Missed

error: Content is protected !!