ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪ್ರಕರಣ: ಚಿಕಿತ್ಸೆ ಫಲಿಸದೆ ಕಾಲೇಜು ವಿದ್ಯಾರ್ಥಿ ಸಾವು

ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪ್ರಕರಣ: ಚಿಕಿತ್ಸೆ ಫಲಿಸದೆ ಕಾಲೇಜು ವಿದ್ಯಾರ್ಥಿ ಸಾವು

ಉಜಿರೆ ಕಾಲೇಜು ರಸ್ತೆಯ ಬಳಿ ಚಲಿಸುತ್ತಿದ್ದಾಗ ಬೈಕ್ ನಿಯಂತ್ರಣ ಕಳೆದುಕೊಂಡು ಡಿವೈಡರ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕಲ್ಮಂಜ ಗ್ರಾಮದ ಕರಿಯನೆಲ ಆನಂದ ಗೌಡರ ಪುತ್ರ, ಉಜಿರೆಯ ಎಸ್.ಡಿ.ಎಮ್ ಡಿಪ್ಲೊಮಾ ವಿದ್ಯಾರ್ಥಿ ದಿಕ್ಷೀತ್ (20ವ) ಅಪಘಾತದಲ್ಲಿ ಮೃತಪಟ್ಟ ಯುವಕನಾಗಿದ್ದಾರೆ.

ನ.23ರಂದು ಕಾಲೇಜಿನಲ್ಲಿ ಕಾರ್ಯಕ್ರಮವಿದ್ದ ಕಾರಣ ವಿದ್ಯಾರ್ಥಿಯು ಮಧ್ಯಾಹ್ನ ಊಟ ಮಾಡಿ ವಾಪಸ್ ಬರುವಾಗ ಬೈಕಿನ ಸ್ಟ್ಯಾಂಡ್ ತೆಗೆಯದೆ ಚಲಾಯಿಸಿಕೊಂಡು ಬಂದ ಪರಿಣಾಮ ನಿಯಂತ್ರಣ ಕಳೆದುಕೊಂಡ ಬೈಕ್ ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದು, ಯುವಕನ ತಲೆಗೆ ಗಂಭೀರ ಗಾಯವಾಗಿದ್ದು, ಆತನನ್ನು ಕೂಡಲೇ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ವೇಳೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Leave a Reply

You May Have Missed

error: Content is protected !!